ಉತ್ತರ ಪ್ರದೇಶದಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ: ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ

Prasthutha|

ಲಕ್ನೋ: ಉತ್ತರ ಪ್ರದೇಶದ ಮೌ ಜಿಲ್ಲೆಯ ಸರಾಯ್ ಲಖಾನ್ಸಿಯಾದ ಖಾನ್ ಪುರ ಎಂಬಲ್ಲಿ ಡಾ. ಬಿ.ಆರ್. ಆಂಬೇಡ್ಕರ್ ಪ್ರತಿಮೆಯನ್ನು ಧ್ವಂಸಗೊಳಿಸಿದ ಘಟನೆಯ ಬಗ್ಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಘಟನೆಗೆ ಸಂಬಂಧಿಸಿದಂತೆ ಮೌ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ) ಸುಶೀಲ್ ಘುಲೆ ಪ್ರತಿಕ್ರಿಯಿಸುತ್ತಾ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪ್ರತಿಮೆಯನ್ನು ಬದಲಾಯಿಸುವ ಭರವಸೆಯ ನಂತರ ಅಲ್ಲಿನ ಪರಿಸ್ಥಿತಿ ಹತೋಟಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾವುದೇ ಅಹಿತಕರ ಘಟನೆ ಮರುಕಳಿಸದಂತೆ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಪ್ರತಿಮೆಗೆ ಹಾನಿಗೈದ ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ಮುಂದುವರಿಸಲಾಗಿದೆ ಎಂದು ಎಸ್.ಪಿ ತಿಳಿಸಿದ್ದಾರೆ.
ಖಾನ್ ಪುರ ಗ್ರಾಮದಲ್ಲಿ ಸ್ಥಾಪಿಸಲಾಗಿದ್ದ ಅಂಬೇಡ್ಕರ್ ಪ್ರತಿಮೆಗೆ ಮಂಗಳವಾರ ದುಷ್ಕರ್ಮಿಗಳ ತಂಡವೊಂದು ಇಟ್ಟಿಗೆಯಿಂದ ಹೊಡೆದು ಹಾನಿಗೊಳಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

- Advertisement -

ಮಾಹಿತಿ ಹರಿಡುತ್ತಿದ್ದಂತೆ ಸ್ಥಳೀಯ ರಾಜಕಾರಣಿಗಳ ಜೊತೆ ನೂರಾರು ಗ್ರಾಮಸ್ಥರು ಜಮಾಯಿಸಿದ್ದರು.



Join Whatsapp