ಸಂವಿಧಾನಕ್ಕೆ ಸದಾ ಬದ್ಧರಾಗಿರುವ ಸಂಕಲ್ಪವನ್ನು ಪುನರುಚ್ಛರಿಸೋಣ: ಮುಖ್ಯಮಂತ್ರಿ ಬೊಮ್ಮಾಯಿ

Prasthutha|

ಬೆಂಗಳೂರು: “1949ರ ನವೆಂಬರ್ 26ರಂದು ಭಾರತದ ಸಂವಿಧಾನವನ್ನು ಅಂದಿನ ಸಂವಿಧಾನ ಸಭೆ ಅಂಗೀಕರಿಸಿತು. ನಮ್ಮ ಸಂವಿಧಾನದ ಸದಾಶಯಗಳನ್ನು ಸಂರಕ್ಷಿಸುವ ಹಾಗೂ ಪಾಲಿಸುವ ದೃಢನಿಶ್ಚಯದೊಂದಿಗೆ ನಮ್ಮ ಎಲ್ಲ ಸಂವಿಧಾನ ಕರ್ತೃಗಳನ್ನು ಸ್ಮರಿಸೋಣ, ಸಂವಿಧಾನಕ್ಕೆ ಸದಾ ಬದ್ಧರಾಗಿರುವ ಸಂಕಲ್ಪವನ್ನು ಪುನರುಚ್ಛರಿಸೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

- Advertisement -

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ, ಕೋಮುವಾದ, ಜಾತಿತಾರತಮ್ಯ, ಮೂಢನಂಬಿಕೆಗಳಂತಹ ಸಾಮಾಜಿಕ ಪಿಡುಗುಗಳು ಮತ್ತು ಸರ್ವಾಧಿಕಾರದ ವಿರುದ್ದದ ಹೋರಾಟಕ್ಕೆ ನಮಗಿರುವ ಅಸ್ತ್ರ ಸಂವಿಧಾನಮಾತ್ರ. ನಾವು ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ. ನಾಡಿನ ಸಮಸ್ತ ಬಂಧುಗಳಿಗೆ ಸಂವಿಧಾನ ದಿನದ ಶುಭಾಶಯಗಳು ಎಂದು ತಿಳಿಸಿದ್ದಾರೆ.


ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ, ವಿಶಾಲ ದೃಷ್ಟಿಕೋನ, ಸಮಾನ ಅವಕಾಶದ ಆಶಯದೊಂದಿಗೆ ಡಾ.ಅಂಬೇಡ್ಕರ್ ಅವರ ಅಧ್ಯಕ್ಷತೆಯಲ್ಲಿ ರಚನೆಯಾದ ಸಂವಿಧಾನವನ್ನು 1949ರ ನ. 26ರಂದು ದೇಶಕ್ಕೆ ಸಮರ್ಪಣೆ ಮಾಡಿದ ಐತಿಹಾಸಿಕ ದಿನವನ್ನು ಸ್ಮರಿಸೋಣ. 2 ವರ್ಷ 11 ತಿಂಗಳು 17 ದಿನಗಳಲ್ಲಿ ರಚನೆಯಾದ ಜಗತ್ತಿನ ಅತಿದೊಡ್ಡ ಲಿಖಿತ ಸಂವಿಧಾನವೂ ಜಗತ್ತಿಗೆ ಮಾದರಿ, ನಮ್ಮೆಲ್ಲರ ಪಾಲಿನ ಪವಿತ್ರ ಗ್ರಂಥ ಎಂದು ತಿಳಿಸಿದ್ದಾರೆ.



Join Whatsapp