ಧಾರವಾಡ | ಎಸ್‌ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಮತ್ತೆ 77 ಜನರಲ್ಲಿ ಕೋವಿಡ್ ಸೋಂಕು !

Prasthutha|

ಧಾರವಾಡ: ಎಸ್‌ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಶನಿವಾರ ಮತ್ತೆ 77 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿರುವ ಬಗ್ಗೆ ವರದಿಯಾಗಿದೆ. ಶುಕ್ರವಾರ ರಾತ್ರಿಯವರೆಗೆ 204 ಜನರಲ್ಲಿ ಸೋಂಕು ಪತ್ತೆಯಾಗಿತ್ತು. ಇದೀಗ ಮತ್ತೆ 77 ಮಂದಿ ಸೋಂಕಿತರಾಗುವ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 281ಕ್ಕೆ ಏರಿಕೆ ಕಂಡಿದೆ.

- Advertisement -

ಪಾಸಿಟಿವ್ ಗೊಂಡ ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗಿದೆ. ಎಲ್ಲರಿಗೂ ಚಿಕಿತ್ಸೆ, ಔಷಧೋಪಚಾರ ನೀಡಲಾಗುತ್ತಿದೆ, ತಪಾಸಣೆಗೆ ಒಳಪಟ್ಟವರು ಪ್ರತ್ಯೇಕವಾಗಿ ಇರಲು ಸೂಚಿಸಲಾಗಿದೆ. ಇನ್ನೂ 1,822 ಮಂದಿಯ ತಪಾಸಣಾ ವರದಿಗಳು ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಜೆ. ಪಾಟೀಲ ತಿಳಿಸಿದ್ದಾರೆ.

ವರದಿಯಾಗಿರುವ 281 ಪ್ರಕರಣಗಳಲ್ಲಿ, ಕೇವಲ 6 ಜನರಲ್ಲಿ ಮಾತ್ರ ರೋಗದ ಸಾಮಾನ್ಯ ಲಕ್ಷಣಗಳಿವೆ. ಉಳಿದ 275 ಜನರಲ್ಲಿ ಯಾವುದೇ ರೋಗದ ಲಕ್ಷಣಗಳು ಇಲ್ಲ. ಯಾವುದೇ ಸಾವು ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ.



Join Whatsapp