ಕೊರೊನಾ ಹೊಸ ತಳಿಯ ಆತಂಕ: ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ, ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ

Prasthutha|

ಬೆಂಗಳೂರು; ಧಾರವಾಡ, ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೇರಳ ಗಡಿಭಾಗದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ. ತಜ್ಞ ವೈದ್ಯರ ಮಾರ್ಗದರ್ಶನದಂತೆ ಜಿಲ್ಲಾಡಳಿತಗಳು ವಿಶೇಷ ನಿಯಂತ್ರಣ ಕ್ರಮಗಳಿಗೆ ಮುಂದಾಗಿದೆ. ಈ ನಡುವೆ ಕಡೆಲೆಕಾಯಿ ಪರಿಷೆ, ಕ್ರಿಸ್ ಮಸ್, ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿ ಹೊರಡಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ.

- Advertisement -


ಕೋವಿಡ್ ಎರಡನೇ ಅಲೆ ಕಡಿಮೆಯಾಗುತ್ತಿದ್ದಂತೆ ಇದೀಗ ಜಗತ್ತಿನಾದ್ಯಂತ ಕೊರೊನಾ ಹೊಸ ತಳಿಯ ಆತಂಕದ ಹಿನ್ನೆಲೆ ರಾಜ್ಯದ ಗಡಿಭಾಗದಲ್ಲಿ ಆರೋಗ್ಯಾಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ. ಮೈಸೂರಿನ ಎಚ್.ಡಿ.ಕೋಟೆಯ ಬಾವಲಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಕೇರಳದಲ್ಲಿ ಇತ್ತೀಚೆಗೆ ನೋರೋ ವೈರಸ್ ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಗಡಿ ಮೂಲಕ ರಾಜ್ಯ ಪ್ರವೇಶಿಸುವವರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.


ಇನ್ನು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು, ಸಿಬ್ಬಂದಿ, ಆಶಾ ಕಾರ್ಯಕರ್ತರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ನೊರೋ ವೈರಸ್ ಪತ್ತೆ ಹಾಗೂ ಚಿಕಿತ್ಸೆ ಬಗ್ಗೆ ತರಬೇತಿ ನೀಡಲಾಗುತ್ತಿದೆ. ಧಾರವಾಡದಲ್ಲಿ ಕಳೆದೆರಡು ದಿನಗಳಿಂದ 281 ಹೊಸ ಕೋವಿಡ್ ಸೋಂಕು ಪ್ರಕರಣ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ್ ಹೇಳಿದ್ದಾರೆ.

- Advertisement -


ಎಲ್ಲರಿಗೂ ಚಿಕಿತ್ಸೆ, ಔಷದೋಪಚಾರ ನಡೆಯುತ್ತಿದ್ದು, ಸೋಂಕಿತರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಇನ್ನು 1 ಸಾವಿರದ 822 ಮಂದಿಯ ತಪಾಸಣಾ ವರದಿಗಳು ಬರಬೇಕಾಗಿದೆ. ವರದಿಯಾಗಿರುವ 281 ಪ್ರಕರಣಗಳಲ್ಲಿ ಕೇವಲ 6 ಮಂದಿಯಲ್ಲಿ ಮಾತ್ರ ರೋಗದ ಸಾಮಾನ್ಯ ಲಕ್ಷಣಗಳಿವೆ. 275 ಜನರಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಂಡಿಲ್ಲ ಮತ್ತು ಈವರೆಗೆ ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ ಎಂದು ಅವರು ಹೇಳಿದರು.



Join Whatsapp