ಉಪ್ಪಿನಂಗಡಿ: ಲಾರಿಯೊಂದು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ 12 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿಯ ಮಠ ಸಮೀಪದ ಮಸೀದಿ ಬಳಿ ಸೋಮವಾರ ನಡೆದಿದೆ.
ಮೃತ ಬಾಲಕನನ್ನು ಅಲ್ತಾಫ್ (12) ಎಂದು ಗುರುತಿಸಲಾಗಿದೆ. ಈತ 7ನೇ ತರಗತಿಯಲ್ಲಿ ಕಲಿಯುತ್ತಿದ್ದ.
ಘಟನೆಯಲ್ಲಿ ಅಲ್ತಾಫ್ ಅವರ ತಾಯಿ ಖದೀಜಮ್ಮ, ಅವರ ಪುತ್ರ ಆಶಿಕ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿದ್ದೀಕ್ ಎಂಬವರಿಗೆ ಸೇರಿದ ರಿಕ್ಷಾದಲ್ಲಿ ಈ ಕುಟುಂಬ ಉಪ್ಪಿನಂಗಡಿಯಿಂದ ಮಠ ಬಳಿ ಇರುವ ಮನೆಗೆ ಹೋಗುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ 12 ವರ್ಷ ಪ್ರಾಯದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಉಳಿದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.