ಬೆಂಗಳೂರು: ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಿಗ್ಗೆ ದಾಳಿ ಸಿಸಿಬಿ ದಾಳಿ ಮಾಡಿದ್ದು ಅಗ್ರಹಾರದ ಬ್ಯಾರಕ್ ಹಾಗೂ ಕೊಠಡಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಜೈಲಿನ ವಿಚಾರಣಾಧೀನ ಕೈದಿಗಳು ಮತ್ತು ಶಿಕ್ಷೆಗೊಳಗಾದ ಕೈದಿಗಳು ಅಕ್ರಮ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು ಎನ್ನಲಾಗಿದೆ, ಅಲ್ಲದೇ ಜೈಲಿನೊಳಗೆ ಮೊಬೈಲ್ ಬಳಸುತ್ತಿದ್ದ ಹಾಗೂ ಡ್ರಗ್ಸ್ ಸೇವಿಸುತ್ತಿದ್ದ ಆರೋಪಗಳೂ ಕೇಳಿ ಬಂದಿತ್ತು. ಇದೀಗ ಸಿಸಿಬಿ ಪೊಲೀಸರು ಅಗ್ರಹಾರಕ್ಕೆ ದಿಢೀರ್ ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ಗಾಂಜಾ ಮತ್ತು ಗಾಂಜಾ ಸೇದುವ ಚಿಲುಮೆ ಜಪ್ತಿ ಮಾಡಲಾಗಿದ್ದು. ಪೊಲೀಸರು ಪರಿಶೀಲನೆ ಮುಂದುವರಿಸಿದ್ದಾರೆ.