ಮಲಪ್ಪುರಮ್: ಕೇರಳದ ಕಣ್ಣೂರು ಸಮೀಪದ ತಲಶ್ಯೇರಿಯಲ್ಲಿ ಮೆರವಣಿಗೆಯ ವೇಳೆ ಮಸೀದಿ ಮತ್ತು ನಮಾಝ್ ವಿರುದ್ಧ ಪ್ರಚೋದನಾಕಾರಿ ಘೋಷಣೆ ಕೂಗಿದ ಆರೋಪದಲ್ಲಿ ಸುಮಾರು 25 ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಜೆಪಿ ಮತ್ತು ಸಂಘಪರಿವಾರ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಮುಸ್ಲಿಮ್ ವಿರೋಧಿ ಘೋಷಣೆಗಳನ್ನು ಕೂಗಿದ ಆರೋಪದಡಿಯಲ್ಲಿ ಕೇರಳ ಪೊಲೀಸರು ಐಪಿಸಿ ಸೆಕ್ಷನ್ 153 ಮತ್ತು 143 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪ್ರತಿಭಟನಾಕಾರರು ಮುಸ್ಲಿಮರನ್ನು ಗುರಿಯಾಗಿಸಿ ಐದು ಬಾರಿ ನಮಾಝ್ ನಿರ್ವಹಿಸಲು ಯಾವುದೇ ಮಸೀದಿ ಬಾಕಿ ಇರುವುದಿಲ್ಲ ಎಂದು ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರು ಉದ್ರೇಕಕಾರಿಯಾಗಿ ಘೋಷಣೆ ಕೂಗಿದ್ದರು.
ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ಕಠಿಣ ಕ್ರಮಕ್ಕೆ ಡಿ.ವೈ.ಎಫ್.ಐ ಮತ್ತು ಎಸ್.ಡಿ.ಪಿ.ಐ ಸೇರಿದಂತೆ ಹಲವಾರು ಸಂಘಟನೆಗಳು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದೆ.