ಲಿಂಗಸುಗೂರು: ಇಲ್ಲಿನ ಮುದಗಲ್ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಂಚಿಕೆ ಮಾಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಐತಿಹಾಸಿಕ ಮುದಗಲ್ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 2018/2019 ರ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಗಳನ್ನು ಹಂಚಿಕೆ ಮಾಡಬೇಕಾಗಿತ್ತು. ಆದರೆ ಲಿಂಗಸುಗೂರು ಕಾಲೇಜಿನ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಂಚಿಕೆ ಮಾಡಲಾಗಿದೆ. ಆದರೆ ಇದುವರೆಗೆ ಮುದಗಲ್ ಪ್ರಥಮ ದಜೆ೯ ಕಾಲೇಜಿನ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಂಚಿಕೆ ಮಾಡದೆ ತಾರತಮ್ಯ ಮಾಡಲಾಗಿದೆ. ಮುದಗಲ್ ಕಾಲೇಜಿನ ಪ್ರಾಚಾರ್ಯರು ಹಾಗೂ ಅಧಿಕಾರಿಗಳು ಲ್ಯಾಪ್ ಟಾಪ್ ವಿತರಣೆಯಲ್ಲಿ ತಾರತಮ್ಯ ಮಾಡಿದ್ದಾರೆ ಎಂದು ಕರವೇ ಕಾರ್ಯಕರ್ತರು ಆರೋಪಿಸಿದರು.
ನಿರ್ಲಕ್ಷ್ಯದಿಂದಾಗಿ ವಿದ್ಯಾರ್ಥಿಗಳು ಲ್ಯಾಪ್ ಟಾಪ್ ಗಳಿಂದ ವಂಚಿತರಾಗಿದ್ದು ಇದರಿಂದಾಗಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸಕ್ಕಾಗಿ ತೊಂದರೆಯಾಗಿದೆ. ಕೂಡಲೇ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದ ಮುದಗಲ್ ಕರವೇ ಅಧ್ಯಕ್ಷ ಎಸ್.ಎ.ನಯೀಮ್ ಅವರು ಇಲ್ಲದಿದ್ದರೆ ಕರವೇ ಪದಾಧ ಕಾರಿಗಳು ಹಾಗು ವಿದ್ಯಾರ್ಥಿಗಳೊಂದಿಗೆ ಸೇರಿ ಉಗ್ರ ಹೋರಾಟ ಮಾಡಲಾ ಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಎಸ್.ಎನ್. ಖಾದ್ರಿ, ಸಾಬು ಹುಸೇನ, ನಾಗರಾಜ ನಾಯಕ, ಜಮೀರ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.