ಸುಧಾ ಭಾರದ್ವಾಜ್ ಜಾಮೀನು ಪ್ರಶ್ನಿಸಿ ಸುಪ್ರೀಮ್ ಕೋರ್ಟ್ ಮೊರೆ ಹೋದ ಎನ್ಐಎ

Prasthutha|

ನವದೆಹಲಿ: ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವರ್ಷಗಳಿಂದ ಜೈಲಿನಲ್ಲಿರುವ ವಕೀಲೆ ಸುಧಾ ಭಾರದ್ವಾಜ್ ಅವರಿಗೆ ಮಂಜೂರು ಮಾಡಲಾಗಿರುವ ಜಾಮೀನನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್.ಐ.ಎ) ಸುಪ್ರೀಮ್ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ.

- Advertisement -

ಬಾಂಬೆ ಹೈಕೋರ್ಟ್ ಶ್ರೀಮತಿ ಭಾರದ್ವಾಜ್ ಅವರ ವೈಯಕ್ತಿಕ ಸ್ವಾತಂತ್ರ್ಯದ ಹಕ್ಕನ್ನು ಎತ್ತಿ ಹಿಡಿದು ಸಂವಿಧಾನದ ಪರಿಚ್ಛೇದ 21 ಅಡಿಯಲ್ಲಿ ಜಾಮೀನು ನೀಡಿತ್ತು.

ಬಂಧನದ ಅವಧಿಯಲ್ಲಿ ನಿಗಧಿಯ 90 ದಿನಗಳನ್ನು ಮೀರಲು ಎನ್.ಐ.ಎ ನ್ಯಾಯಾಲಯಕ್ಕೆ ಅಧಿಕಾರವಿಲ್ಲ ಎಂಬ ಆಧಾರದಲ್ಲಿ ಹೈಕೋರ್ಟ್ ಡಿಸೆಂಬರ್ 1 ರಂದು ತನ್ನ ಜಾಮೀನು ಆದೇಶದಲ್ಲಿ ತಿಳಿಸಿತ್ತು.

- Advertisement -

ಈ ಮಧ್ಯೆ ಈ ಪ್ರಕರಣದಲ್ಲಿ ರೋನಾ ವಿಲ್ಸನ್, ವರವರ ರಾವ್, ಸುಧೀರ್ ಧವಳೆ, ಸುರೇಂದ್ರ ಗಡ್ಲಿಂಗ್, ಶೋಮಾ ಸೇನ್, ಮಹೇಶ್ ರಾವುತ್, ವೆರ್ನಾನ್ ಗೊನ್ಸಾಲ್ವಿಸ್ ಮತ್ತು ಅರುಣ್ ಫೆರೇರಾ ಅವರಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ.

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಮತಿ ಭಾರದ್ವಾಜ್ ಅವರನ್ನು 2018 ರಲ್ಲಿ ಪುಣೆ ಪೊಲೀಸರು ವಶಕ್ಕೆ ಪಡೆದಿದ್ದರು ಮತ್ತು 2019 ರ ಫೆಬ್ರವರಿಯಲ್ಲಿ ಆರೋಪಪಟ್ಟಿ ಸಲ್ಲಿಸಿದ್ದರು.



Join Whatsapp