ತಮಿಳುನಾಡು: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತಗೊಳಿಸಲು ಒತ್ತಾಯಿಸಿ ತಮಿಳುನಾಡು ಸರ್ಕಾರದ ವಿರುದ್ಧ ನಡೆಸಿದ್ದ ಪ್ರತಿಭಟನೆಯಲ್ಲಿ ಆತ್ಮಾಹುತಿ ದಾಳಿ ನಡೆಸುವುದಾಗಿ ಪ್ರಚೋದನಕಾರಿ ಭಾಷಣ ಮಾಡಿದ್ದ ಬಿಜೆಪಿಯ ಅರಿಯಲೂರು ಜಿಲ್ಲಾಧ್ಯಕ್ಷ ಕೆ. ಅಯ್ಯಪ್ಪನ್’ರನ್ನು ಪೊಲೀಸರು ಬಂಧಿಸಿದ್ದಾರೆ.
ಡಿಸೆಂಬರ್ 1ರಂದು ಅರಿಯಲೂರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಭಾಷಣ ಮಾಡಿದ್ದ ಕೆ.ಅಯ್ಯಪ್ಪನ್, ತಮಿಳುನಾಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇಂಧನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರ ವಿಫಲವಾದರೆ ನಮ್ಮ ರಾಜ್ಯಾಧ್ಯಕ್ಷರ ಆದೇಶದಂತೆ ಆತ್ಮಾಹುತಿ ದಾಳಿ ನಡೆಸಲೂ ಸಿದ್ಧ ಎಂದು ಬೆದರಿಕೆ ಹಾಕಿದರು. ಅವರ ಪ್ರಚೋದನಕಾರಿ ಭಾಷಣದ ವಿಡಿಯೋ ತುಣುಕು
ವಾಲಾಜಾನಗರದ ವಿಎಒ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಶುಕ್ರವಾರ ಜಯಂಕೊಂಡಂನಲ್ಲಿರುವ ನಿವಾಸದಿಂದ ಅಯ್ಯಪ್ಪನ್’ರನ್ನು ಬಂಧಿಸಲಾಗಿದ್ದು, ಐಪಿಸಿ ಸೆಕ್ಷನ್ 504 ಒಳಗೊಂಡಿರುವ ಆರು ಸೆಕ್ಷನ್‌ಗಳ ಅಡಿಯಲ್ಲಿ ಬಿಜೆಪಿ ನಾಯಕನ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಬಂಧಿತ ಬಿಜೆಪಿ ಜಿಲ್ಲಾಧ್ಯಕ್ಷನನ್ನು ಅರಿಯಲೂರು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್, ಅಯ್ಯಪ್ಪನ್’ರನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಈ ಹಿನ್ನೆಲೆಯಲ್ಲಿ ಅವರನ್ನು ಜಯನಕೊಂಡಂ ಉಪ ಕಾರಾಗೃಹದಲ್ಲಿ ಇರಿಸಲಾಗಿದೆ.