ಭದ್ರತಾ ಪಡೆಗಳಿಂದ ಗುಂಡಿನ ದಾಳಿ| ಮೃತಪಟ್ಟ ಕಾರ್ಮಿಕ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

Prasthutha|

ಕೋಹಿಮಾ: ಭದ್ರತಾ ಪಡೆಗಳ ಗುಂಡಿನ ದಾಳಿಗೆ ಬಲಿಯಾದವರ ಕುಟುಂಬಕ್ಕೆ ನಾಗಲ್ಯಾಂಡ್ ಸರ್ಕಾರ 5 ಲಕ್ಷ ರೂ. ಪರಿಹಾರ ಘೋಷಿಸಿದೆ.

- Advertisement -

ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಭರಿಸಲಾಗುವುದು ಎಂದು ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಘೋಷಿಸಿದ್ದಾರೆ.

ಮುಖ್ಯಮಂತ್ರಿಗಳು ಇಂದು (ಸೋಮವಾರ) ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಘಟನೆ ಕುರಿತು ತನಿಖೆ ನಡೆಸಲು ಐಜಿಪಿ ನೇತೃತ್ವದ ಉನ್ನತ ಮಟ್ಟದ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವುದಾಗಿ ಅವರು ತಿಳಿಸಿದ್ದಾರೆ.

- Advertisement -

ಮೊನ್ ಜಿಲ್ಲೆಯ ಟಿರು ಮತ್ತು ಒಟಿಂಗ್‌ ಗ್ರಾಮಗಳಲ್ಲಿ 14 ನಾಗರಿಕರನ್ನು ಭದ್ರತಾ ಪಡೆಗಳ ಸಿಬ್ಬಂದಿ ಗುಂಡಿಟ್ಟು ಹತ್ಯೆಗೈದಿದ್ದು, ದಾಳಿಯಲ್ಲಿ 11 ನಾಗರಿಕರು ಗಾಯಗೊಂಡಿದ್ದಾರೆ.



Join Whatsapp