ಮಂತ್ರಿ ಮಾಲ್ ಗೆ ಮತ್ತೆ ಬೀಗ ಜಡಿದ BBMP !

Prasthutha|

ಬೆಂಗಳೂರು: ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಮತ್ತೆ ಬಿಬಿಎಂಪಿ ಪಶ್ಚಿಮ ವಲಯದ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಕಳೆದ 3 ವರ್ಷದಿಂದ ಮಂತ್ರಿ ಮಾಲ್ ಬಿಬಿಎಂಪಿಗೆ ಒಟ್ಟು 27 ಕೋಟಿ ತೆರಿಗೆಯನ್ನು ಪಾವತಿಸದ ಹಿನ್ನೆಲೆಯಲ್ಲಿ ಬೀಗ ಹಾಕಲಾಗಿದೆ. ಮಾಂತ್ರಿ ಮಾಲ್ ನಿರ್ವಾಹಕರಿಗೆ ಪದೇಪದೆ ನೋಟಿಸ್ ಜಾರಿ ಮಾಡಿದರೂ ತೆರಿಗೆ ಪಾವತಿಸಿಲ್ಲ ಎನ್ನಲಾಗಿದೆ. ಹೀಗಾಗಿ ಇಂದು ಮತ್ತೆ ಬಿಬಿಎಂಪಿ ಬೀಗ ಜಡಿದಿದೆ.

- Advertisement -

ಈ ಹಿಂದೆ ನವೆಂಬರ್ 15ಕ್ಕೆ ಅಧಿಕಾರಿಗಳು ಮಾಲ್ಗೆ ಬೀಗ ಹಾಕಿದ್ದರು. ಈ ವೇಳೆ 5 ಕೋಟಿ ರೂ. ತೆರಿಗೆ ಪಾವತಿಸಿದ್ದ ಹಿನ್ನೆಲೆಯಲ್ಲಿ ಮಾಲ್ ಮಾಲೀಕರು, ಬಳಿಕ ಬಾಕಿ ಪಾವತಿಗೆ ಸಮಯಾವಕಾಶ ಕೇಳಿದ್ದರು, ಆದರೆ ಆಡಳಿತ ಮಂಡಳಿಗೆ ಕೊಟ್ಟ ಸಮಯಾವಕಾಶ ಮುಕ್ತಾಯಗೊಂಡಿದ್ದರೂ ತೆರಿಗೆ ಪಾವತಿಸದ ಕಾರಣ ಮತ್ತೆ ಬೀಗ ಹಾಕಲಾಗಿದೆ.

ಕಳೆದ ಬಾರಿ ಬೀಗ ಜಡಿದಿದ್ದ ಸಂದರ್ಭ 15 ದಿನದೊಳಗೆ ತೆರಿಗೆ ಪಾವತಿಸುವುದಾಗಿ ಮಾಲೀಕರು ಮನವಿ ಮಾಡಿದ್ದರು. ಬಿಬಿಎಂಪಿ ಆಯುಕ್ತರ ಬಳಿ ಮಂತ್ರಿಮಾಲ್ ಮಾಲೀಕ ಮನವಿ ಮಾಡಿದ್ದರಿಂದ 15 ದಿನಗಳ ಕಾಲಾವಕಾಶ ನೀಡಲಾಗಿತ್ತು. ಅಲ್ಲದೇ ನವೆಂಬರ್ ತಿಂಗಳ ಅಂತ್ಯದೊಳಗೆ ತೆರಿಗೆ ಪಾವತಿಸುವಂತೆ ಸೂಚನೆ ನೀಡಲಾಗಿತ್ತು ಎನ್ನಲಾಗಿದೆ.



Join Whatsapp