ಠಾಣೆಯಲ್ಲಿ ಮುಸ್ಲಿಮ್ ಯುವಕನಿಗೆ ಚಿತ್ರಹಿಂಸೆ| ಸಬ್ ಇನ್ಸ್‌ಪೆಕ್ಟರ್ ಅಮಾನತು

Prasthutha|

ಬೆಂಗಳೂರು: ಪೊಲೀಸ್ ಠಾಣೆಯಲ್ಲಿ 23 ವರ್ಷದ ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಿ ಮೂತ್ರ ಕುಡಿಯುವಂತೆ ಒತ್ತಾಯಿಸಿದ್ದ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ನನ್ನು ಅಮಾನತು ಮಾಡಲಾಗಿದೆ.

- Advertisement -

ಅಮಾನತುಗೊಂಡ ಹರೀಶ್ ಕೆ.ಎನ್ ಬ್ಯಾಟರಾಯನಪುರ ಪೊಲೀಸ್ ಠಾಣೆಯ ಸಬ್ ಇನ್ಸ್’ಪೆಕ್ಟರ್ ಆಗಿದ್ದಾರೆ.
ಹರೀಶ್ ಅವರನ್ನು ಕರ್ತವ್ಯ ಲೋಪ, ಪ್ರಕರಣ ದಾಖಲಿಸದೇ ಇರುವುದು ಇತ್ಯಾದಿ ಕಾರಣಗಳಿಂದ ಅಮಾನತುಗೊಳಿಸಲಾಗಿದೆ. ಸಂತ್ರಸ್ತೆಯ ಕುಟುಂಬ ಮಾಡಿದ ಆರೋಪಗಳ ಬಗ್ಗೆ ತನಿಖೆ ನಡೆಸಲು ಇಲಾಖಾ ತನಿಖೆಗೆ ಆದೇಶಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ಸಂಜೀವ್ ಎಂ.ಪಾಟೀಲ್ ತಿಳಿಸಿದ್ದಾರೆ.

ವಿಚಾರಣೆಯ ನೆಪದಲ್ಲಿ ತೌಸಿಫ್ ಪಾಷಾ (23) ಎಂಬ ಯುವಕನನ್ನು ಠಾಣೆಗೆ ಕರೆದೊಯ್ದ ಪೊಲೀಸರು ಅಮಾನವೀಯವಾಗಿ ಥಳಿಸಿ ಚಿತ್ರಹಿಂಸೆ ನೀಡಿದ್ದರು.
ಡಿಸೆಂಬರ್ 1ರ ಮಧ್ಯರಾತ್ರಿ ಒಂದು ಗಂಟೆಗೆ ಮನೆಗೆ ಏಕಾಏಕಿ ನುಗ್ಗಿದ ಪೊಲೀಸರು ನೆರೆಯ ಯುವಕನೊಂದಿಗೆ ಜಗಳವಾಡಿದ್ದ ಎಂಬ ಆರೋಪದಲ್ಲಿ ತೌಸೀಫ್ ನನ್ನು ವಿಚಾರಣೆಯ ನೆಪದಲ್ಲಿ ಠಾಣೆಗೆ ಕರೆದೊಯ್ಯುತ್ತಾರೆ. ಎಎಸ್ ಐ ಎನ್.ಕೆ.ಹರೀಶ್ ಮತ್ತು ಸಿಬ್ಬಂದಿ ತೌಸೀಫ್ ನೊಂದಿಗೆ ಕ್ರೂರವಾಗಿ ವರ್ತಿಸಿ ಆತನ ಗಡ್ಡವನ್ನು ಕತ್ತರಿಸಿ, ಮೂತ್ರ ಕುಡಿಯುವಂತೆ ಒತ್ತಾಯಿಸುವುದರೊಂದಿಗೆ ಚಿತ್ರಹಿಂಸೆ ನೀಡಿ, ಬಿಡುಗಡೆಗಾಗಿ ಹಣದ ಬೇಡಿಕೆ ಇಟ್ಟಿದ್ದಾರೆ ಎಂದು ಸಂತ್ರಸ್ತನ ತಂದೆ ಅಸ್ಲಾಂ ಪಾಷಾ ಆರೋಪಿಸಿದ್ದರು.



Join Whatsapp