ಮಡಿಕೇರಿ: ಡಿ.17- 18 ರಂದು ನದಿ ಉತ್ಸವ

Prasthutha|

ಮಡಿಕೇರಿ: ಸ್ವಾತಂತ್ರ್ಯಾ ಅಮೃತ ಮಹೋತ್ಸವ ಪ್ರಯುಕ್ತ ಜಿಲ್ಲೆಯಲ್ಲಿ ‘ನದಿ ಉತ್ಸವ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲರೂ ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ್ ಮನವಿ ಮಾಡಿದ್ದಾರೆ.

- Advertisement -


ಕಾವೇರಿ ನೀರಾವರಿ ನಿಗಮ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನದಿ ಉತ್ಸವ ಆಚರಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಹಾಗೂ ವಿವಿಧ ಸಂಸ್ಥೆಗಳ ಪ್ರಮುಖರ ಜೊತೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.


ನದಿ ಉತ್ಸವ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳು ತೊಡಗಿಸಿಕೊಳ್ಳುವಂತಾಗಬೇಕು. ನದಿ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಸಲಹೆ, ಮಾರ್ಗದರ್ಶನ ಅತ್ಯಗತ್ಯ ಇದೆ ಎಂದು ಹೇಳಿದರು.

- Advertisement -


ಇನ್ನೂ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ನಾಗೇಶ್ ಮಾತನಾಡಿ, ಡಿಸೆಂಬರ್ 17 ಮತ್ತು 18 ರಂದು ನದಿ ಉತ್ಸವ ಆಯೋಜಿಸಲು ಉದ್ದೇಶಿಸಲಾಗಿದೆ. ಡಿಸೆಂಬರ್, 17 ರಂದು ತಲಕಾವೇರಿಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಹಾಗೆಯೇ ಡಿ.18 ರಂದು ಕುಶಾಲನಗರದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.


ಡಿಸೆಂಬರ್, 17 ರಂದು ತಲಕಾವೇರಿಯಲ್ಲಿ ಮಧ್ಯಾಹ್ನದ ವೇಳೆಗೆ ನದಿ ಉತ್ಸವ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ತಲಕಾವೇರಿಯಿಂದ ಭಾಗಮಂಡಲದವರೆಗೆ ಸ್ವಚ್ಛತೆ ಸಂಬಂಧ ಬೈಕ್ ಜಾಗೃತಿ ಜಾಥಾ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಬಳಿಕ ತ್ರಿವೇಣಿ ಸಂಗಮದಲ್ಲಿ ನದಿ ಸಂರಕ್ಷಣೆ ಸಂಬಂಧಿಸಿದಂತೆ ಜಾಗೃತಿ ಕಾರ್ಯಕ್ರಮ ನಡೆಯಲಿದೆ. ಜೊತೆಗೆ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ, ಹಾಗೆಯೇ ದೀಪೋತ್ಸವ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.


ಹಾಗೆಯೇ ಡಿಸೆಂಬರ್, 18ರಂದು ಕುಶಾಲನಗರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾವೇರಿ ಪ್ರತಿಮೆಯಿಂದ ಅಯ್ಯಪ್ಪಸ್ವಾಮಿ ದೇವಾಲಯದವರೆಗೆ ನದಿ ಉತ್ಸವದ ಜಾಗೃತಿ ಜಾಥಾ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು..



Join Whatsapp