ಮಂಗಳೂರು: ಮಾರ್ಗನ್ಸ್ ಗೇಟ್ ಬಳಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ !

Prasthutha|

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮಾರ್ಗನ್ಸ್ ಗೇಟ್ ಬಳಿ ನಡೆದಿದೆ.

- Advertisement -

ಇಬ್ಬರು ಮಕ್ಕಳ ಜೊತೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ.

ಚಾಲಕನಾಗಿ ಕೆಲಸ ಮಾಡುತ್ತಿದ್ದ ನಾಗೇಶ್ ಶೇರಿಗುಪ್ಪ (30), ಅವರ ಪತ್ನಿ ವಿಜಯಲಕ್ಷ್ಮೀ (26), ಮಕ್ಕಳಾದ ಸಪ್ನಾ (8) ಮತ್ತು ನಾಲ್ಕು ವರ್ಷದ ಸಮರ್ಥ್ ಸಾವನ್ನಪ್ಪಿದವರು.

- Advertisement -

 ವಿಜಯಲಕ್ಷ್ಮೀ ಅವರು ಕೂಡ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ನಾಗೇಶ್ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿದ್ದರೆ, ವಿಜಯಲಕ್ಷ್ಮೀ ಮತ್ತು ಮಕ್ಕಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.

ಮಂಗಳೂರು ನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ನಾಗೇಶ್ ಅವರು ಬಾಗಲಕೋಟೆ ಸುನಗ್ ಗ್ರಾಮ ಬೀಳಗಿ ಮೂಲದವರಾಗಿದ್ದು, ಕೆಲವು ವರ್ಷಗಳ ಹಿಂದೆ ಮಂಗಳೂರಿಗೆ ಬಂದು ನೆಲೆಸಿದ್ದರು.

ಸುದ್ದಿ ತಿಳಿದ ತಕ್ಷಣವೇ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೌಟುಂಬಿಕ ಕಾರಣಗಳ ಹಿನ್ನೆಲೆಯಲ್ಲಿ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ ‌ಎಂದು ಪರಿಶೀಲನೆ ಬಳಿಕ ಶಶಿಕುಮಾರ್ ತಿಳಿಸಿದ್ದಾರೆ.
ಮೊದಲು ಇಬ್ಬರು ಮಕ್ಕಳು ಪತ್ನಿಗೆ ವಿಷ ಉಣಿಸಿ ಬಳಿಕ ತಂದೆ ನೇಣಿಗೆ ಶರಣಾಗಿರುವ ಅನುಮಾನವಿದ್ದು ಸೂಕ್ತ ತನಿಖೆಯನ್ನು ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.



Join Whatsapp