ಉತ್ತರ ಪ್ರದೇಶ: ಮಹಿಳೆಯರಿಗೆ ‘ಶಕ್ತಿ ವಿಧಾನ್’ ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್

Prasthutha|

PUC ಪಾಸಾದವರಿಗೆ ಸ್ಮಾರ್ಟ್ ಫೋನ್, ಪದವೀಧರರಿಗೆ ಇಲೆಕ್ಟ್ರಿಕ್ ಸ್ಕೂಟರ್ !

- Advertisement -

ಲಕ್ನೋ: ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಉತ್ತರ ಪ್ರದೇಶದಲ್ಲಿ ಜನಪ್ರಿಯ ಯೋಜನೆಗಳ ಮೂಲಕ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಮುಂದಾಗಿದ್ದು, ಮಹಿಳೆಯರಿಗಾಗಿ ‘ಶಕ್ತಿ ವಿಧಾನ್’ ವಿಶೇಷ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿಸಲಾಗುವುದು ಹಾಗೂ ಅದರಲ್ಲಿ ಶೇ.40ರಷ್ಟು ಮಹಿಳೆಯರಿಗೆ ಪ್ರಾತಿನಿಧ್ಯ ನೀಡಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಉತ್ತರ ಪ್ರದೇಶದ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಪ್ರಿಯಾಂಕಾ ಗಾಂಧಿ ಘೋಷಿಸಿದ್ದಾರೆ.

- Advertisement -

ಯುಪಿ ರಾಜಧಾನಿ ಲಕ್ನೋದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಪ್ರಿಯಾಂಕಾ, ‘ಪೊಲೀಸ್ ಇಲಾಖೆಯ ಎಲ್ಲಾ ಹುದ್ದೆಗಳಲ್ಲಿ ಮಹಿಳೆಯರಿಗೆ ಶೇ.25ರಷ್ಟು ಮೀಸಲಾತಿ, 12ನೇ ತರಗತಿ ಉತ್ತೀರ್ಣರಾದ ಹುಡುಗಿಯರಿಗೆ ಸ್ಮಾರ್ಟ್ ಫೋನ್, ಪದವೀಧರ ಮಹಿಳೆಯರಿಗೆ ಇಲೆಕ್ಟ್ರಿಕ್ ಸ್ಕೂಟರ್, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ 10,000 ಸಾವಿರ ರುಪಾಯಿ ಗೌರವಧನ ಸೇರಿದಂತೆ ಮಹಿಳಾ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಜನಪ್ರಿಯ ಘೋಷಣೆಗಳ ಮೊರೆ ಹೋಗಿದ್ದಾರೆ.

ಕಾಂಗ್ರೆಸ್ ದೇಶಕ್ಕೆ ಮೊದಲ ಮಹಿಳಾ ಪ್ರಧಾನಿ ಹಾಗೂ ಮುಖ್ಯಮಂತ್ರಿಯನ್ನು ನೀಡಿದ ಪಕ್ಷವಾಗಿದೆ. ಮಹಿಳೆಯರ ಸಬಲೀಕರಣ ಘೋಷಣೆಯು ಕೇವಲ ಕಾಗದಕ್ಕೆ ಸೀಮಿತ ಆಗಬಾರದು. ರಾಜಕೀಯದಲ್ಲಿ ಮಹಿಳಾ ಪ್ರಾತಿನಿಧ್ಯ ಅನುಷ್ಠಾನಕ್ಕೆ ಬರಬೇಕು ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಮುಂದಿನ ವರ್ಷದ ಆರಂಭದಲ್ಲೇ ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯು ನಡೆಯಲಿದೆ. ಕಾಂಗ್ರೆಸ್-ಬಿಜೆಪಿ-ಎಸ್’ಪಿ ಸೇರಿದಂತೆ ಎಲ್ಲಾ ಪಕ್ಷಗಳು ತಮ್ಮದೇ ಆದ ಕಾರ್ಯತಂತ್ರವನ್ನು ರೂಪಿಸಿ, ಪ್ರಚಾರ ಕಾರ್ಯವನ್ನು ಮಾಡುತ್ತಿದೆ. ದೇಶದಲ್ಲಿ ಅತೀ ಹೆಚ್ಚು ವಿಧಾನ ಸಭೆ ಕ್ಷೇತ್ರವನ್ನು ಉತ್ತರ ಪ್ರದೇಶ ಹೊಂದಿದ್ದು, ಒಟ್ಟು 403 ಸದಸ್ಯರನ್ನು ಹೊಂದಿದೆ.



Join Whatsapp