ಹಾಸನ: ತಲೆ ನೋವು ಗುಣಪಡಿಸುವ ನೆಪದಲ್ಲಿ ಪೂಜೆ ವೇಳೆ ಪೂಜಾರಿ ಹೊಡೆದ ಬೆತ್ತದ ಏಟು ತಿಂದ ಮಹಿಳೆ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಪಾರ್ವತಿ (47) ಮೃತಪಟ್ಟ ಮಹಿಳೆಯಾಗಿದ್ದಾರೆ. ಕಳೆದ ಕೆಲದಿನಗಳಿಂದ ತಲೆ ನೋವಿನಿಂದ ಬಳಲುತ್ತಿದ್ದ ಮಹಿಳೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದರೂ ಗುಣಮುಖವಾಗಿರಲಿಲ್ಲ. ಅದರಿಂದಾಗಿ ಹಿರಿಯಾಪಟ್ಟಣದಮ್ಮದೇವರ ಮೊರೆ ಹೋಗಿದ್ದರು. ನೀವು ಗುಣಮುಖರಾಗಲು ಪೂಜೆ ಮಾಡಿಸಬೇಕು ಎಂದು ಮಹಿಳೆಗೆ ಪೂಜಾರಿ ತಿಳಿಸಿದ್ದಾರೆ.
ಪೂಜೆ ಮಾಡಿ ತಲೆನೋವು ಗುಣಪಡಿಸುವುದಾಗಿ ಹೇಳಿ ಮಹಿಳೆ ತಲೆಗೆ ಪೂಜಾರಿ ಬೆತ್ತದಿಂದ ಹೊಡೆದಿದ್ದಾನೆ. ತಲೆಗೆ ಒಳಗೆ ಪೆಟ್ಟಾಗಿ ಮಹಿಳೆ ಅಸ್ವಸ್ಥಗೊಂಡಿದ್ದಾರೆ. ಕೊಡಲೇ ಆಕೆಯನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಘಟನೆ ನಂತರ ಪೂಜಾರಿ ನಾಪತ್ತೆಯಾಗಿದ್ದು ಪ್ರಕರಣ ದಾಖಲಿಸಿರುವ ಶ್ರವಣಬೆಳಗೊಳ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.