ರಾಜ್ಯದಲ್ಲಿ ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆ: ಸೋಂಕಿತರ ಸಂಖ್ಯೆ 3ಕ್ಕೆ ಏರಿಕೆ

Prasthutha|

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಒಮಿಕ್ರಾನ್ ರೂಪಾಂತರಿ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

- Advertisement -

ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ 34 ವರ್ಷದ ವ್ಯಕ್ತಿಗೆ ಕೋವಿಡ್​ ಪಾಸಿಟಿವ್ ದೃಢಪಟ್ಟಿತ್ತು. ಅವರ ಸ್ಯಾಂಪಲ್​ ಅನ್ನು ಜಿನೋಮಿಕ್ ಸೀಕ್ವೆನ್ಸಿಂಗ್ ​ಗೆ ಕಳುಹಿಸಿದಾಗ ಒಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಒಮಿಕ್ರಾನ್ ಸೋಂಕಿತ ವ್ಯಕ್ತಿ ಬೆಂಗಳೂರಿನ ಬೊಮ್ಮನಹಳ್ಳಿ ನಿವಾಸಿ ಎಂದು ತಿಳಿದುಬಂದಿದೆ. ಸದ್ಯಕ್ಕೆ ಸೋಂಕಿತ ವ್ಯಕ್ತಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಸೋಂಕಿತರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಐವರು ಮತ್ತು 15 ಮಂದಿ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಲಾಗಿದ್ದು, ಅವರ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಟ್ವೀಟ್​ ಮಾಡಿದ್ದಾರೆ.



Join Whatsapp