ಐತಿಹಾಸಿಕ, ಪುರಾತತ್ವ ಸ್ಮಾರಕ, ಕಟ್ಟಡ ರಕ್ಷಿಸಲು ಸರ್ಕಾರ ಬದ್ಧ: ಕೋಟಾ ಶ್ರೀನಿವಾಸ ಪೂಜಾರಿ

Prasthutha|

ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಐತಿಹಾಸಿಕ ಮತ್ತು ಪುರಾತತ್ವ ಇಲಾಖೆಯ ಸ್ಮಾರಕ ಹಾಗೂ ಕಟ್ಟಡಗಳನ್ನು ರಕ್ಷಿಸಲು ಸರ್ಕಾರ ಬದ್ಧ ಎಂದು ಪ್ರವಾಸೋದ್ಯಮ ಸಚಿವರ ಪರವಾಗಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ತಿಗಿಂದು ತಿಳಿಸಿದರು.

- Advertisement -

ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರೋರ್ವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಪುರಾತತ್ವ ಇಲಾಖೆಯ ಸಂರಕ್ಷಿತ ಪ್ರದೇಶದಿಂದ 100 ಮೀಟರ್ ವ್ಯಾಪ್ತಿಯಲ್ಲಿ ಕಾಮಗಾರಿ ಕೈಗೊಳ್ಳಲು ಇಲಾಖೆಯ ಅನುಮತಿ ಪಡೆಯಬೇಕಿದೆ ಎಂದರು.

ಮುಂದಿನ ದಿನಗಳಲ್ಲಿ ಈ ಸಮಸ್ಯೆಯನ್ನು ಪರಿಹರಿಸಿ ಇಲಾಖೆಯಿಂದ ಅನುಮತಿ ಪಡೆದು ಕಾಮಗಾರಿ ಕೈಗೆತ್ತಿಕೊಳ್ಳುವುದಾಗಿ ಹೇಳಿದರು.

- Advertisement -

ಇದೇ ವೇಳೆ ಸಭಾಪತಿ ಬಸವರಾಜ ಹೊರಟ್ಟಿ ಮಧ್ಯಪ್ರವೇಶ ಮಾಡಿ, ರಾಜ್ಯದ ಅನೇಕ ಕಡೆ ಇಂತಹ ಅಪರೂಪದ ಸ್ಮಾರಕಗಳಿವೆ. ಅವುಗಳನ್ನು ಮುಂದಿನ ಪೀಳಿಗೆಗೆ ರಕ್ಷಣೆ ಮಾಡುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.



Join Whatsapp