ಬೆಳ್ತಂಗಡಿ: ಪಿಕಪ್ ವಾಹನವೊಂದರಲ್ಲಿ ಕಸಾಯಿಖಾನೆಗೆ ದನ ಸಾಗಿಸುತ್ತಿದ್ದ ಬಿಜೆಪಿ ನಾಯಕ ಸೇರಿ ಇಬ್ಬರನ್ನು ಸಂಘಪರಿವಾರದ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳ್ತಂಗಡಿಯ ತಾಲೂಕಿನ ಪಡಂಗಡಿ ಎಂಬಲ್ಲಿ ನಡೆದಿದೆ.
ಶೇಖರ ಮತ್ತು ನೆವಿಲ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ತಾಲೂಕಿನ ಪಡಂಗಡಿ ಎಂಬಲ್ಲಿ ಪಿಕಪ್ ವಾಹನವೊಂದರಲ್ಲಿ ದನ ಸಾಗಿಸುತ್ತಿದ್ದ ಮಾಹಿತಿ ತಿಳಿದ ಸಂಘಪರಿವಾರದವರು ವಾಹನವನ್ನು ತಡೆದು ಅದರಲ್ಲಿದ್ದ ಇಬ್ಬರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿ ಶೇಖರ ಬಿಜೆಪಿ ಕಾರ್ಯಕರ್ತನಾಗಿದ್ದು, ಪಕ್ಷದ ಜವಾಬ್ದಾರಿಯನ್ನು ಹೊಂದಿದ್ದಾನೆ ಎಂದು ತಿಳಿದು ಬಂದಿದೆ.
ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News