ಉಪ್ಪಿನಂಗಡಿ; ವಿಚಾರಣೆಯ ನೆಪದಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದ ಪಾಪ್ಯುಲರ್ ಫ್ರಂಟ್ ನಾಯಕರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಸಂಘಟನೆಯ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.
ಬೆಳಗ್ಗೆಯಿಂದ ಸಂಜೆವರೆಗೂ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಮಾತುಕತೆ ನಡೆಸಿದ ಬಳಿಕ ಓರ್ವ ಮುಖಂಡರನ್ನು ಪೋಲಿಸರು ಬಿಟ್ಟು ಕಳಿಸಿದ್ದರು. ಉಳಿದಿಬ್ಬರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ಮುಂದುವರಿಸಿದ ಕಾರ್ಯಕರ್ತರ ಮೇಲೆ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಪೊಲೀಸರು ಏಕಾಏಕಿ ಲಾಠಿ ಬೀಸಿದ್ದಾರೆ, ಪರಿಣಾಮ ಹಲವು ಪ್ರತಿಭಟನಾಕಾರರು ತೀವ್ರ ವಾಗಿ ಗಾಯಗೊಂಡಿದ್ದಾರೆ.
ಉಪ್ಪಿನಂಗಡಿಯಲ್ಲಿ ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ: 50 ಕ್ಕೂ ಅಧಿಕ ಮಂದಿಗೆ ಗಾಯ
Prasthutha|