ಪ್ರತಿಭಟನೆ ತಾತ್ಕಾಲಿಕ ಸ್ಥಗಿತಗೊಳಿಸಿರುವುದಷ್ಟೇ, ಹಿಂಪಡೆದಿಲ್ಲ: ರಾಕೇಶ್ ಟಿಕಾಯತ್

Prasthutha|

ಹೊಸದಿಲ್ಲಿ: ವಿವಿಧ ಬೇಡಿಕೆಗಳ ಈಡೇರಿಕೆ ಕುರಿತು ಕೇಂದ್ರ ಸರ್ಕಾರದ ಜತೆಗಿನ ಮಾತುಕತೆ ಪೂರ್ಣಗೊಳ್ಳುವವರೆಗೂ ನಮ್ಮ ಹೋರಾಟವನ್ನು ಕೆಲವು ಕಾಲದವರೆಗೆ ಸ್ಥಗಿತಗೊಳಿಸಿದ್ದೇವೆಯೇ ಹೊರತು ಪೂರ್ಣ ಪ್ರಮಾಣದಲ್ಲಿ ಹಿಂಪಡೆಯಲಿಲ್ಲ ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.

- Advertisement -

ನಮ್ಮ ಹೋರಾಟಕ್ಕೆ ಕೈಜೋಡಿಸಿದ ಪ್ರತಿಯೊಬ್ಬರಿಗೂ ನಾನು ಈ ಸಂದರ್ಭದಲ್ಲಿ ಧನ್ಯವಾದ ಅರ್ಪಿಸುತ್ತೇವೆ. ಅಲ್ಲದೇ ಅಗತ್ಯ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಗ್ರಾಮಸ್ಥರು, ಸಾರ್ವಜನಿಕರಿಗೂ ಅಭಿನಂದನೆ ಸಲ್ಲಿಸುವುದಾಗಿ ಟಿಕಾಯತ್ ಹೇಳಿದರು.

ಕೇಂದ್ರ ಸರ್ಕಾರ ಹಿಂಪಡೆದಿರುವ ವಿವಾದಿತ ಮೂರು ಕೃಷಿ ಕಾಯ್ದೆಗೆ ಸಂಬಂಧಿಸಿದಂತೆ ಸರ್ಕಾರದ ಜತೆ ಮಾತುಕತೆ ಮುಂದುವರಿದಿದೆ. ನಮ್ಮ ಹೋರಾಟ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ, ಆದರೆ ಹಿಂಪಡೆಯಲಿಲ್ಲ ಎಂದು ಟಿಕಾಯತ್ ತಿಳಿಸಿದರು.

- Advertisement -

ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿದ್ದ ವಿವಾದಿತ ಕೃಷಿ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಕಳೆದ ಒಂದು ವರ್ಷದಿಂದ ಉತ್ತರಪ್ರದೇಶ, ದೆಹಲಿ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಇದೀಗ ಹೋರಾಟವನ್ನು ಸ್ಥಗಿತಗೊಳಿಸಿ ತಮ್ಮ ಮನೆಗಳಿಗೆ ವಾಪಸ್ ಆಗುತ್ತಿರುವ ಹಿನ್ನೆಲೆಯಲ್ಲಿ ಟಿಕಾಯತ್ ಈ ಪ್ರತಿಕ್ರಿಯೆ ನೀಡಿದ್ದಾರೆ.

ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News



Join Whatsapp