ಮುಂಬೈ: ಹೋಮ್ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕೆ ಬಾಲಿವುಡ್ ನಟಿ ಆಲಿಯಾ ಭಟ್ ವಿರುದ್ಧ ಬಾಂಬೆ ಮುನ್ಸಿಪಲ್ ಕಾರ್ಪೊರೇಷನ್ ಎಫ್ ಐಆರ್ ದಾಖಲಿಸಲು ನಿರ್ಧರಿಸಿದೆ.
ಚಿತ್ರ ಪ್ರಚಾರಕ್ಕಾಗಿ ನಟ ರಣಬೀರ್ ಕಪೂರ್ ಅವರೊಂದಿಗೆ ದೆಹಲಿಗೆ ತೆರಳಿದ್ದ ಆಲಿಯಾ ಭಟ್, ಹೋಮ್ ಕ್ವಾರಂಟೈನ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎನ್ನಲಾಗಿದೆ.
ಇತ್ತೀಚಿಗೆ ನಿರ್ದೇಶಕ ಕರಣ್ ಜೋಹರ್ ಆಯೋಜಿಸಿದ್ದ ಪಾರ್ಟಿಯಲ್ಲಿ ಕರೀನಾ ಕಪೂರ್ ಖಾನ್, ಅಮೃತಾ ಅರೋರಾ, ಸಂಜಯ್ ಕಪೂರ್ ಅವರ ಪತ್ನಿ ಮಹೀಪ್ ಕಪೂರ್ ಮತ್ತು ಸೀಮಾ ಖಾನ್ ಸೇರಿದಂತೆ ಪಾರ್ಟಿಯಲ್ಲಿದ್ದ ಹಲವರಲ್ಲಿ ಕೊರೋನಾ ಕಾಣಿಸಿಕೊಂಡಿತ್ತು. ಹಾಗಾಗಿ ನೆಗೆಟಿವ್ ಕಾಣಿಸಿಕೊಂಡಿದ್ದರೂ ಆಲಿಯಾ ಭಟ್ ಗೆ 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿರುವಂತೆ ಸಲಹೆ ನೀಡಲಾಗಿತ್ತು. ಆದರೆ ಅವರು ಹೋಮ್ ಕ್ವಾರಂಟೈನ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ.