ಬೆಳಗಾವಿ: ಸದಾ ಪ್ರಾತಸ್ಮರಣೀಯ ವೀರನಾದ, ಸಂಗೊಳ್ಳಿ ರಾಯಣ್ಣ ರವರ ಪ್ರತಿಮೆಗೆಬೆಳಗಾವಿ ನಗರದಲ್ಲಿ ಹಾನಿ ಮಾಡಿರುವ ಘಟನೆಯನ್ನು ಖಂಡಿಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಸಂಗೊಳ್ಳಿ ರಾಯಣ್ಣ ಹಾಗೂ ಶಿವಾಜಿ ಮಹಾರಾಜ್ ಇಬ್ಬರೂ ನಮ್ಮೆಲ್ಲರ ಹೆಮ್ಮೆಯ ಪ್ರತೀಕವಾಗಿದ್ದು, ಪ್ರತಿಮೆಯ ಮೇಲಿನ ದಾಳಿಯು ಅಕ್ಷಮ್ಯ ಅಪರಾಧವಾಗಿದೆ ಎಂದು ಹೇಳಿದ್ದಾರೆ.
ಈ ಇಬ್ಬರೂ ಪ್ರತಿಯೊಬ್ಬ ನಾಗರಿಕರೂ ಹೆಮ್ಮೆ ಹಾಗೂ ಗರ್ವದಿಂದ ನೆನಸಿಕೊಳ್ಳುವಂತ ಭಾರತೀಯ ಪುತ್ರರಾಗಿದ್ದಾರೆ. ಇವರ ಹೆಸರಿನಲ್ಲಿ, ಕೆಲವು ಕಿಡಿಗೇಡಿಗಳು, ದುಷ್ಕೃತ್ಯ ನಡೆಸಿ ಭಾಷಾ ಹಾಗೂ ಸಹೋದರತ್ವ ಬಾಂಧವ್ಯವನ್ನು ಕೆಡಿಸುವಂತಹ ಕೃತ್ಯ ಎಸಗಿರುವ ಘಟನೆ ಅಕ್ಷಮ್ಯ ಅಪರಾಧವಾಗಿದ ಎಂದು ಹೇಳಿದರು.
ಘಟನೆಯ ಕುರಿತು ಮಾಹಿತಿಯನ್ನು ಪಡೆದುಕೊಂಡಿದ್ದೇನೆ, ಹಾಗೂ ಬೆಂಗಳೂರು ಹಾಗೂ ಬೆಳಗಾವಿ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಎಫ್ ಐ ಅರ್ ದಾಖಲಾಗಿದ್ದು, ಕೆಲವರನ್ನು ವಶಕ್ಕೆ ಪಡೆಯಲಾಗಿದೆ, ರಾಜ್ಯದ ಜನತೆ ಶಾಂತಿ ಹಾಗೂ ಸಾಮರಸ್ಯ ಕಾಪಾಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಕೋರಿಕೊಂಡಿದ್ದಾರೆ.