ನವಾಬ್ ಮಲಿಕ್ ವಿರುದ್ಧ ಬಿಜೆಪಿ ನಾಯಕ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮುಂಬೈ ನ್ಯಾಯಾಲಯ

Prasthutha|

ಮುಂಬೈ: ಕೋವಿಡ್ ಮಾರ್ಗಸೂಚಿಯನ್ನು ಉಲ್ಲಂಘಿಸಿದ್ದಕ್ಕಾಗಿ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ನೀಡುವಂತೆ ಕೋರಿ ಬಿಜೆಪಿ ನಾಯಕ ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ನ್ಯಾಯಾಲಯ ವಜಾಗೊಳಿಸಿದೆ.

- Advertisement -

ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿ ಮೋಹಿತ್ ಅವರು CrPC ಯ 156 (3) ರ ಅಡಿಯಲ್ಲಿ ಸಲ್ಲಿಸಿದ ಕ್ರಿಮಿನಲ್ ಅರ್ಜಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ PI ಮೊಕಾಶಿ ವಜಾಗೊಳಿಸಿ ಆದೇಶ ನೀಡಿದ್ದಾರೆ. ಇದು ಮಲಿಕ್ ವಿರುದ್ಧ ಸಲ್ಲಿಕೆಯಾದ ನಾಲ್ಕನೇ ಅರ್ಜಿಯಾಗಿದೆ.

ನವಾಬ್ ವಿರುದ್ಧ ಐಪಿಸಿ ಸೆಕ್ಷನ್ 188, 269, 270, 499, 500, ವಿಪತ್ತು ನಿರ್ವಹಣಾ ಕಾಯ್ದೆ ಸೆಕ್ಷನ್ 3 ಮತ್ತು 51 ಅಡಿಯಲ್ಲಿ ಪ್ರಕರಣ ದಾಖಲಿಸಬೇಕೆಂದು ಕೋರಿ ಮುಂಬೈ ನ್ಯಾಯಾಲಯದಲ್ಲಿ ಮೋಹಿತ್ ಅರ್ಜಿ ಸಲ್ಲಿಸಿದ್ದರು.

- Advertisement -

ಹಿರಿಯ ವಕೀಲರಾದ ಫೈಝ್ ಮರ್ಚೆಂಟ್ ನ್ಯಾಯಾಲಯದಲ್ಲಿ ನವಾಬ್ ಮಲಿಕ್ ವಿರುದ್ಧ ಅರ್ಜಿ ಸಲ್ಲಿಸಿದ್ದರು.



Join Whatsapp