ಆಲಪ್ಪುಝ: ಕೇರಳದಲ್ಲಿ SDPI ಮತ್ತು BJP ರಾಜ್ಯ ನಾಯಕರ ಹತ್ಯೆಗೆ ಸಂಬಂಧಿಸಿದಂತೆ ಆಲಪ್ಪುಝ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಂಡಿದ್ದು, ನಿಷೇಧಾಜ್ಞೆ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಸರ್ವಪಕ್ಷ ಸಭೆ ಕರೆದಿದ್ದಾರೆ.
ಸಚಿವರಾದ ಸಾಜಿ ಚೆರಿಯನ್ ಮತ್ತು ಪಿ.ಎಸ್. ಪ್ರಸಾದ್ ಪಾಲ್ಗೊಳ್ಳುವ ಸಭೆಯಲ್ಲಿ ಸರ್ವ ಪಕ್ಷಗಳ ಜಿಲ್ಲಾ ನಾಯಕರೂ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಜಿಲ್ಲೆಯಲ್ಲಿ ಘರ್ಷಣೆ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ನಾಳೆ ಬೆಳಗಿನ ಜಾವದವರೆಗೂ ನಿಷೇಧಾಜ್ಞೆ ವಿಸ್ತರಿಸಲಾಗಿದೆ.
ಹತ್ಯೆಗೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಶಂಕಿತರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
SDPI ನಾಯಕ ಕೆ.ಎಸ್. ಶಾನ್ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು RSS ಕಾರ್ಯಕರ್ತರಾದ ರತೀಶ್ ಮತ್ತು ಪ್ರಸಾದ್ ನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.