ಹೈದರಾಬಾದ್: ಹೈದರಾಬಾದ್ ಅನ್ನು ಭಾಗ್ಯನಗರ ಎಂದು ಆರ್ ಎಸ್ ಎಸ್ ಟ್ವೀಟ್ ನಲ್ಲಿ ಉಲ್ಲೇಖಿಸುವ ಮೂಲಕ ಮರುನಾಮಕರಣ ಮಾಡುವ ಕಾರ್ಯಸೂಚಿಯನ್ನು ಮತ್ತೊಮ್ಮೆ ಪರೋಕ್ಷವಾಗಿ ಪ್ರಸ್ತಾಪಿಸಿದೆ.
ಆರ್ಎಸ್ಎಸ್ ಮತ್ತು ಬಿಜೆಪಿ 2022ರ ಮೊದಲ ವಾರದಲ್ಲಿ ಮೂರು ದಿನಗಳ ಸಮನ್ವಯ ಸಭೆಯನ್ನು ಕರೆದಿದ್ದು,
ತೆಲಂಗಾಣದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಆರ್ಎಸ್ಎಸ್ ಮತ್ತು ಬಿಜೆಪಿ ಹಾಗೂ ವಿವಿಧ ಅಂಗ ಸಂಸ್ಥೆಗಳು ಕಾರ್ಯವೈಖರಿ ಮತ್ತು ಚುನಾವಣೆಗೆ ಮಾಡಿಕೊಳ್ಳುತ್ತಿರುವ ಸಿದ್ಧತೆ ಬಗ್ಗೆ ಈ ಸಮನ್ವಯ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಉತ್ತರ ಪ್ರದೇಶದಲ್ಲಿಯೂ ಆರ್ ಎಸ್ ಎಸ್ ಹಾಗೂ ಬಿಜೆಪಿ ಹಲವು ನಗರಗಳಿಗೆ ಹೆಸರನ್ನು ಮರುನಾಮಕರಣ ಮಾಡುತ್ತಿವೆ.