ತನ್ನ ಪಕ್ಷದ ವಿರುದ್ಧವೇ ಧರಣಿ ಕುಳಿತ ಮುಖ್ಯಮಂತ್ರಿಯ ಅತ್ತಿಗೆ!

Prasthutha|

ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಅತ್ತಿಗೆ, ಪಕ್ಷದ ಶಾಸಕಿ ಸೀತಾ ಸೊರೆನ್ ತಮ್ಮದೇ ಸರ್ಕಾರದ ವಿರುದ್ಧ ಧರಣಿ ನಡೆಸಿದ್ದು, ಆಡಳಿತ ಪಕ್ಷವನ್ನು ಭಾರೀ ಮುಜುಗರಕ್ಕೀಡು ಮಾಡಿದೆ.

- Advertisement -

ವಿಧಾನಸಭೆಯ ದ್ವಾರದಲ್ಲಿ ಧರಣಿ ಕುಳಿತು ಆಕ್ರೋಶ ವ್ಯಕ್ತಪಡಿಸಿದ ಜಾಮಾ ಕ್ಷೇತ್ರದ ಶಾಸಕಿ ಸೀತಾ ಸೊರೇನ್, ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿ ಅಕ್ರಮವಾಗಿ ಕಲ್ಲಿದ್ದಲು ಸಾಗಣೆ ಮಾಡುತ್ತಿರುವವರ ವಿರುದ್ಧ ಸರ್ಕಾರ ಯಾವ ಕ್ರಮವನ್ನೂ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

“ಜಲ, ಅರಣ್ಯ, ಭೂಮಿ ರಕ್ಷಣೆ ಕೋರಿ ಸದನಕ್ಕೆ ಬಂದಿದ್ದೇನೆ. ಸೆಂಟ್ರಲ್ ಕೋಲ್ ಫೀಲ್ಡ್ ಲಿಮಿಟೆಡ್‌ನ ಆಮ್ರಪಾಲಿ ಯೋಜನೆಯಲ್ಲಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿ ಅಕ್ರಮವಾಗಿ ಕಲ್ಲಿದ್ದಲು ಸಾಗಣೆ ಮಾಡಲಾಗುತ್ತಿದೆ. ಆದರೆ ಅದನ್ನು ತಡೆಯಲು ಸರ್ಕಾರ ಯಾವ ಕ್ರಮವನ್ನೂ ಕೈಗೊಂಡಿಲ್ಲ ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.



Join Whatsapp