ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ಇಲಾಖೆಯ ಯಾವುದೇ ಯೋಜನೆಯನ್ನು ಸ್ಥಗಿತಗೊಳಿಸಿಲ್ಲ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪ ವೇಳೆ ಸದಸ್ಯ ಯು.ಬಿ.ವೆಂಕಟೇಶ್ ಪ್ರಶ್ನೆಗೆ ಉತ್ತರಿಸಿದ ಅವರು, ಕೋವಿಡ್ ಅವಧಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಠಾನ ಮಾಡುತ್ತಿರುವ ಯಾವುದೇ ಯೋಜನೆಗಳು ಕುಂಠಿತಗೊಂಡಿಲ್ಲ ಎಂದು ಹೇಳಿದರು.
ಆದರೆ, ಕೋವಿಡ್ ಹಿನ್ನೆಲೆ ನಿಗಮಗಳಿಂದ ಅನುಷ್ಠಾನ ಮಾಡುತ್ತಿರುವ ಸ್ವಯಂ ಉದ್ಯೋಗ ಯೋಜನೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಸಹಾಯಧನ ಮೊತ್ತವನ್ನು ಪರಿಷ್ಕರಿಸಲಾಗಿದೆ ಎಂದರು.
ಮತ್ತೊಂದೆಡೆ 2019-20 ನೇ ಸಾಲಿನಲ್ಲಿ 41.88 ಕೋಟಿ ರೂ. ಹಾಗೂ 2020-21ನೇ ಸಾಲಿನಲ್ಲಿ 32 ಕೋಟಿರೂ. ವೆಚ್ಚ ಮಾಡಲಾಗಿದೆ ಎಂದು ಸಚಿವರು ಸದನಕ್ಕೆ ತಿಳಿಸಿದರು.