ಜನವರಿ 3ರಿಂದ 15-18 ವರ್ಷದ ಮಕ್ಕಳಿಗೆ ವ್ಯಾಕ್ಸಿನೇಷನ್ ಆರಂಭ: ಪ್ರಧಾನಿ ಮೋದಿ ಘೋಷಣೆ

Prasthutha|

ನವದೆಹಲಿ: 2022ರ ಜನವರಿ ಜನವರಿ 3ರಿಂದ, 15 ವರ್ಷದಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಸಿದ್ಧತೆ ನಡೆಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ಮೋದಿ, ಒಮಿಕ್ರಾನ್ ಬಗ್ಗೆ ಆತಂಕಗೊಳ್ಳಬೇಡಿ. ಆದರೆ ಎಚ್ಚರ ವಹಿಸಿ ಎಂದು ಹೇಳಿದರು. ವಿಶ್ವದಾದ್ಯಂತ ಒಮಿಕ್ರಾನ್ ಸೋಂಕು ಹೆಚ್ಚಾಗುತ್ತಿದೆ ದೇಶದಲ್ಲಿ ಒಮಿಕ್ರಾನ್ ಸೋಂಕು ನಮ್ಮನ್ನು ಕಾಡುತ್ತಿದೆ. ಕೊರೊನಾ ರೂಪಾಂತರಿಯಾಗಿ ಪರಿವರ್ತನೆ ಹೊಂದುತ್ತಿದೆ. ಹೆಚ್ಚುವರಿ ಐಸಿಯು, ಆಕ್ಸಿಜನ್ ಬೆಡ್‌ಗಳನ್ನು ಸಿದ್ಧಪಡಿಸಿದ್ದೇವೆ . ಜನವರಿ 3 ರಿಂದ 15-18 ವರ್ಷದ ಮಕ್ಕಳಿಗೆ ವ್ಯಾಕ್ಸಿನೇಷನ್ ಆರಂಭವಾಗಲಿದೆ ಎಂದರು.

- Advertisement -

ಭಾರತದ ದೊಡ್ಡ ಜನಸಂಖ್ಯೆಯಲ್ಲಿ ಬಹುತೇಕರಿಗೆ ಎರಡು ಡೋಸ್ ಲಸಿಕೆಗಳು ಸಿಕ್ಕಿವೆ. ವಿಶ್ವದಲ್ಲಿ ಅತಿಹೆಚ್ಚು ಜನರಿಗೆ ನಾವು ಲಸಿಕೆ ನೀಡಿದ್ದೇವೆ . ದೇಶದ ಎಲ್ಲ ನಾಗರಿಕರ ಸಾಮೂಹಿಕ ಪರಿಶ್ರಮದಿಂದ 100 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ನೀಡಲು ಸಾಧ್ಯವಾಗಿದೆ. ಈಗ ಎಚ್ಚರಿಕೆ ವಹಿಸುವುದು ಬಹಳ ಅಗತ್ಯವಾಗಿದೆ. ಕೊರೊನಾ ವಿರುದ್ಧ ಭಾರತದ ಹೋರಾಟ ಮುಂದುವರೆಯುತ್ತಿದೆ. ಕೊರೊನಾ ಇನ್ನೂ ಕೂಡ ನಮ್ಮಿಂದ ದೂರ ಆಗಿಲ್ಲ. 12 ತಿಂಗಳಿನಿಂದ ವ್ಯಾಕ್ಸಿನೇಷನ್ ಆರಂಭವಾಗಿದೆ. ವ್ಯಾಕ್ಸಿನ್ ಪಡೆಯುವವರ ಸಂಖ್ಯೆ ಹೆಚ್ಚಾಗಿದೆ. ಕೊರೊನಾ ವಿರುದ್ಧ ಭಾರತದ ಹೋರಾಟ ನಿಲ್ಲವುದಿಲ್ಲ. ವಿಜ್ಞಾನಿಗಳು ಸಂಶೋಧನೆ ನಡೆಸುತ್ತಲೇ ಇದ್ದಾರೆ ಎಂದರು.



Join Whatsapp