ತೇಜಸ್ವಿ ಸೂರ್ಯನ ಬುರುಡೇಲಿ ಮೆದುಳೇ ಇಲ್ಲ: ನಟಿ ರಮ್ಯಾ

Prasthutha|

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯನ ಬುರುಡೆಯಲ್ಲಿ ಮೆದುಳೇ ಇಲ್ಲ ಎಂದು ನಟಿ ರಮ್ಯಾ ವಾಗ್ದಾಳಿ ನಡೆಸಿದ್ದಾರೆ.

- Advertisement -

ರಮ್ಯಾ ತಮ್ಮ ಇನ್ ಸ್ಟಾಗ್ರಾಮ್  ಸ್ಟೋರಿಯಲ್ಲಿ ವಿವಾದಾತ್ಮಕ ಹೇಳಿಕೆಯ ವೀಡಿಯೋವನ್ನು ಶೇರ್ ಮಾಡಿಕೊಂಡು  ಈ ಮನುಷ್ಯನ ಬುರುಡೆಯಲ್ಲಿ ಮೆದುಳು ಇಲ್ಲ ಎಂದು ಬರೆದುಕೊಂಡಿದ್ದಾರೆ. 

ಮುಸ್ಲಿಮರು, ಕ್ರೈಸ್ತರನ್ನು ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ತೇಜಸ್ವಿ ಸೂರ್ಯ ಹೇಳಿಕೆಯನ್ನು ಕೊಟ್ಟಿದ್ದರು. ಈ ಹೇಳಿಕೆಗೆ ನಟಿ ರಮ್ಯಾ ತಮ್ಮದೇ ಶೈಲಿಯಲ್ಲಿ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ, ಭಾಷಣ ಮಾಡುತ್ತಿರುವ ವಿಡಿಯೋದ ಝಲಕ್‌ ನ್ನು ಹಂಚಿಕೊಂಡು ಅವರ ತಲೆಯಲ್ಲಿ ಮೆದುಳೇ ಇಲ್ಲವೆಂದು ಬರೆದುಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ  ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.



Join Whatsapp