ಕೋಲ್ಕತ್ತಾ: ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮುನ್ನ ಪಶ್ಚಿಮ ಬಂಗಾಳ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಪಕ್ಷದ ಅಧಿಕೃತ ವಾಟ್ಸಾಪ್ ಗ್ರೂಪ್‌ಗಳಿಂದ ಶಾಸಕರು ಸೇರಿದಂತೆ ಹಲವು ನಾಯಕರು ಹೊರನಡೆದಿದ್ದಾರೆ ಎಂದು ವರದಿಯಾಗಿದೆ.
ಕಳೆದ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಬಿಜೆಪಿ ರಚಿಸಿರುವ ಹೊಸ ರಾಜ್ಯ ಸಮಿತಿಯೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ಕಳೆದ ಕೆಲವು ದಿನಗಳಲ್ಲಿ ಒಂಬತ್ತು ಶಾಸಕರು ವಾಟ್ಸಾಪ್ ಗ್ರೂಪ್ ಗಳಿಂದ ಹೊರನಡೆದಿದ್ದಾರೆ ಎಂದು ಸುದ್ದಿ ಸಂಸ್ಥೆ ಇಂಡಿಯನ್ ಎಕ್ಸ್’ಪ್ರೆಸ್ ವರದಿ ಮಾಡಿದೆ.
ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಎದುರು ಹಿನಾಯ ಸೋಲನುಭವಿಸಿದ್ದ ಬಿಜೆಪಿಗೆ ಈ ಭಿನ್ನಮತವು ದೊಡ್ಡ ತಲೆನೋವಾಗಿ ಪರಿಣಮಿಸಿದೆ.