ಹರ್ಯಾಣದಲ್ಲಿ ಭೀಕರ ಭೂಕುಸಿತ: ಇಬ್ಬರ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

Prasthutha|

ಚಂಡೀಗಢ: ಹರ್ಯಾಣದ ಭಿವಾನಿ ಜಿಲ್ಲೆಯ ಗಣಿಗಾರಿಕಾ ವಲಯದಲ್ಲಿ ಶನಿವಾರ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಹಲವರು ಸಿಲಿಕಿರುವ ಶಂಕೆ ವ್ಯಕ್ತವಾಗಿದೆ. ಜಿಲ್ಲಾಡಳಿತ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ.

- Advertisement -

ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ತ್ವರಿತ ರಕ್ಷಣಾ ಕಾರ್ಯಾಚರಣೆ ಮತ್ತು ಗಾಯಾಳುಗಳಿಗೆ ತಕ್ಷಣದ ನೆರವು ಖಚಿತಪಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿದೆ.

ಭೂಕುಸಿತದ ವೇಳೆ ಬೇರೆ ಸ್ಥಳಗಳಿಗೆ ಪ್ರಯಾಣಿಸುತ್ತಿದ್ದ ಕಾರ್ಮಿಕರು ತಮ್ಮ ವಾಹನದಲ್ಲಿ ಸಿಲುಕಿಹಾಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

- Advertisement -

ಕೃಷಿ ಸಚಿವ ಜೆ.ಪಿ. ದಲಾಲ್ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ಸ್ಥಳಕ್ಕೆ ಧಾವಿಸಿದ್ದಾರೆ. ಕೆಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಮೂವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇಲ್ಲಿನ ಗಣಿಗಾರಿಕಾ ಸ್ಥಳದಲ್ಲಿ ಇನ್ನೂ ಮೂರರಿಂದ – ನಾಲ್ಕು ಮಂದಿ ಸಿಲುಕಿರುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.

Join Whatsapp