ಲಕ್ನೋ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ನಾಯಕರೊಬ್ಬರು ಚುನಾವಣಾ ಪ್ರಚಾರದ ಭಾಗವಾಗಿ ಮಂಗಳವಾರ ಆಯೋಜಿಸಿದ್ದ ಮ್ಯಾರಥಾನ್ ನಲ್ಲಿ ಕಾಲ್ತುಳಿತ ಉಂಟಾಗಿದೆ. ಬರೇಲಿಯಲ್ಲಿ ನಡೆದ ಮ್ಯಾರಥಾನ್ ನಲ್ಲಿ ನೂರಾರು ಮಹಿಳೆಯರು ಮತ್ತು ಯುವತಿಯರು ಭಾಗವಹಿಸಿದ್ದರು. ಈ ವೇಳೆ ಕಾಲ್ತುಳಿತ ಉಂಟಾಗಿದೆ.
ಮ್ಯಾರಥಾನ್ ನಲ್ಲಿ ಭಾಗವಹಿಸಿದವರ ಪೈಕಿ ಹೆಚ್ಚಿನವರು ಮಾಸ್ಕ್ ಧರಿಸದೆ ಕೋವಿಡ್ ಮಾರ್ಗಸೂಚಿಯನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮ್ಯಾರಥಾನ್ ಪ್ರಾರಂಭವಾದಾಗ ಮುಂಭಾಗದಲ್ಲಿದ್ದ ಕೆಲವು ಮಹಿಳೆಯರು ಜನಸಂದಣಿಯಿಂದಾಗಿ ಮುಗ್ಗರಿಸಿ ನೆಲಕ್ಕೆ ಬಿದ್ದರು ಎಂದು ಹೇಳಲಾಗಿದೆ. ಇದರಿಂದಾಗಿ ಕಾಲ್ತುಳಿತದ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ.