ವಿಧಾನಸೌಧ, ವಿಕಾಸಸೌಧಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

Prasthutha|

ಬೆಂಗಳೂರು: ಕೋವಿಡ್ ಓಮಿಕ್ರಾನ್ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯದ ಶಕ್ತಿಕೇಂದ್ರಗಳಾದ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

- Advertisement -

ಮುಖ್ಯಮಂತ್ರಿಗಳ ಸಚಿವಾಲಯ,ಸಚಿವಾಲಯ ಇಲಾಖೆಯಿಂದ ಮುಂಚಿತವಾಗಿ ನಿಗದಿಯಾಗಿರುವವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ.

ಎಲ್ಲಾ ಇಲಾಖಾ ಮುಖ್ಯಸ್ಥರು,ಸಿಬ್ಬಂದಿಗಳು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರಬೇಕು. ಲಸಿಕೆ ಪಡೆಯದಿರುವ ಸಿಬ್ಬಂದಿಗಳನ್ನು ಗೈರು ಹಾಜರಿ ಎಂದು ಪರಿಗಣಿಸಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

- Advertisement -

 ವಿಧಾನಸೌಧದ ಆವರಣದಲ್ಲಿ ಗುಂಪುಗಟ್ಟದಂತೆ ನಿಗಾವಹಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

ಸಚಿವಾಲಯದಲ್ಲಿ ಅತ್ಯಗತ್ಯ ಸೇವಾ ಇಲಾಖೆಗಳ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಬೇಕು. ಇನ್ನುಳಿದ ಇಲಾಖೆಗಳ ಗ್ರೂಪ್ ಎ ವೃಂದದ ಎಲ್ಲಾ ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗಬೇಕು. ಗ್ರೂಪ್ ಬಿ, ಸಿ ಮತ್ತು ಡಿ ವೃಂದದ ಅಧಿಕಾರಿಗಳು ಶೇ. 50 ರಂತೆ ಮತ್ತು ಸಿಬ್ಬಂದಿ ರೊಟೇಷನ್ ಆಧಾರದಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಆದೇಶ ನೀಡಲಾಗಿದೆ.

ಕೋವಿಡ್ ಕರ್ತವ್ಯಕ್ಕೆ ನಿಯೋಜಿತ  ಅಧಿಕಾರಿ ಮತ್ತು ನೌಕರರು ಕರ್ತವ್ಯಕ್ಕೆ ಹಾಜರಾಗಬೇಕು. ದೃಷ್ಟಿ ಹೀನ ಮತ್ತು ಇತರ ಅಂಗವೈಕಲ್ಯ ಹೊಂದಿರುವ ಅಧಿಕಾರಿ ಮತ್ತು ಸಿಬ್ಬಂದಿ  ಹಾಗೂ ಗರ್ಭಿಣಿ ಮಹಿಳಾ ಸಿಬ್ಬಂದಿಗೆ ಕಚೇರಿ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ.



Join Whatsapp