ಕಾಂಗ್ರೆಸ್ ಪಕ್ಷ ರಚನಾತ್ಮಕ ವಿರೋಧ ಪಕ್ಷವಾಗಿ ವರ್ತಿಸುತ್ತಿಲ್ಲ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ

Prasthutha|

ಬೆಂಗಳೂರು: ರಾಜ್ಯದಲ್ಲಿ, ಹಾಗೂ ದೇಶದಲ್ಲಿ ದಶಕಗಳ ಆಡಳಿತ ನಡೆಸಿದ್ದ ಕಾಂಗ್ರೆಸ್ ಪಕ್ಷ, ಸಂಕಷ್ಟದ ಸಮಯದಲ್ಲಿ ಅತ್ಯಂತ, ಬೇಜವಾಬ್ದಾರಿ ಯಾಗಿ, ವರ್ತಿಸುತ್ತಿದೆ ಹಾಗೂ ಸರಕಾರಕ್ಕೆ ರಚನಾತ್ಮಕ ಬೆಂಬಲ ನೀಡುವುದರ ಬದಲು, ಕೋವಿಡ್ ಸಂಕಷ್ಟ ಸಮಯದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ತೊಡಗಿಕೊಂಡಿದೆ, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ, ಇಂದು, ಮಾತನಾಡಿದ ಸಚಿವರು, ರಾಜ್ಯ ಉಚ್ಚ ನ್ಯಾಯಾಲಯವು ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಕಠಿಣ ಶಬ್ದಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಕರೋನಾ ಸೋಂಕು ಹರಡುವಿಕೆ ಅತ್ಯಂತ ಕಳವಳಕಾರಿ ಎಂದು ಆತಂಕ ವ್ಯಕ್ತಪಡಿಸಿದೆ.

ನ್ಯಾಯಾಲಯದ ಅನಿಸಿಕೆಯನ್ನು ಲೆಕ್ಕಿಸದೆ ದಾರ್ಶ್ಟ್ಯ ಮನೋಭಾವನೆ ಯನ್ನು ತೋರಿಸುತ್ತಿರುವ ಕಾಂಗ್ರೆಸ್ ನಾಯಕರು, ಜನರ ಆಕ್ರೋಶಕ್ಕೆ ಒಳಗಾಗಿದೆ.

- Advertisement -

ಕಾಂಗ್ರೆಸ್ ಪಕ್ಷದ ನಾಯಕರಿಗೆ ನ್ಯಾಯಾಲಯದ ಮೇಲೆ ಗೌರವ ಇದ್ದರೆ, ತಕ್ಷಣ ತಮ್ಮ ರಾಜಕೀಯ ಪ್ರೇರಿತ ಪಾದಯಾತ್ರೆಯನ್ನು, ಕೈಬಿಡಬೇಕು, ಮಹಾ ಜನತೆಯ ಜೀವ ಹಾಗೂ ಬದುಕನ್ನು ಕಾಪಾಡಲು ಶ್ರಮಿಸುತ್ತಿರುವ ಸರಕಾರದ ಜೊತೆ ಕೈಜೋಡಿಸಬೇಕು, ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಾದಯಾತ್ರೆ ಯಲ್ಲಿ ಪಾಲ್ಗೊಂಡಿದ್ದ ಮಾಜಿ ಮುಖ್ಯಮಂತ್ರಿ ಶ್ರೀ ವೀರಪ್ಪ ಮೊಯಿಲಿ, ಮಾಜಿ ಸಚಿವ ಶ್ರೀ ಶಿವಶಂಕರ ರೆಡ್ಡಿ ಹಾಗೂ ಮಾಜಿ ಶಾಸಕಿ ಮಲ್ಲಾಜಮ್ಮ ಹಾಗೂ ಇತರರು ಕರೋನಾ ದಿಂದಾಗಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ತಿಳಿದು ಬಂದಿದೆ.

ಈಗ ಲಾದರೂ ಕಾಂಗ್ರೆಸ್ ನಾಯಕರು ಎಚ್ಚೆತ್ತುಕೊಳ್ಳಬೇಕು ಹಾಗೂ ಸರಕಾರ ಕಠಿಣ ನಿಲುವು ತೆಗೆದುಕೊಳ್ಳುವ ಮೊದಲೇ, ಯಾವುದೇ ಗೊಂದಲಕ್ಕೆ ಅವಕಾಶ ನೀಡದಂತೆ ಪಾದಯಾತ್ರೆ ಹಿಂದೆಗೆದು ಕೊಳ್ಳಬೇಕು, ಎಂದು ಆಗ್ರಹಿಸಿದರು.



Join Whatsapp