ನವದೆಹಲಿ: ದಿವಂಗತ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ಕಿರಿಯ ಸಹೋದರ ಕರ್ನಲ್ ವಿಜಯ್ ರಾವತ್ ಅವರು ಉತ್ತರಾಖಂಡದಲ್ಲಿ ಮುಂಬರುವ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಕರ್ನಲ್ ವಿಜಯ್ ರಾವತ್ ಅವರು ಉತ್ತರಾಖಂಡ ಪುಷ್ಕರ್ ಸಿಂಗ್ ಧಾಮಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದು, ಕೆಲವೇ ದಿನಗಳಲ್ಲಿ ಅವರು ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ ಎಂದು ಹೇಳಿದರು.
ಈ ಕುರಿತು ಮಾತನಾಡಿದ ಕರ್ನಲ್ ವಿಜಯ್ ರಾವತ್ “ನಾನು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದೇನೆ. ಕೆಲವೇ ದಿನಗಳಲ್ಲಿ ನಾನು ಡೆಹ್ರಾಡೂನ್ ನಲ್ಲಿ ಅಧಿಕೃತವಾಗಿ ಬಿಜೆಪಿ ಸೇರುತ್ತೇನೆ” ಎಂದು ಹೇಳಿದ್ದಾರೆ.
ಕಳೆದ ವರ್ಷ ತಮಿಳುನಾಡಿನ ಕೂನೂರ್ ಬಳಿ ಸಂಭವಿಸಿದ ಅಪಘಾತದಲ್ಲಿ ದೇಶದ ಮೊದಲ ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ಮತ್ತು 14 ಸಶಸ್ತ್ರ ಪಡೆಗಳ ಸಿಬ್ಬಂದಿ ಮೃತಪಟ್ಟಿದ್ದರು.