ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಹಳ್ಳೇಗೌಡ ರ ಮೇಲೆ ಹಲ್ಲೆ: ಆರೋಪ ನಿರಾಕರಿಸಿದ ಮುಹಮ್ಮದ್ ನಲಪಾಡ್

Prasthutha|

ಬೆಂಗಳೂರು: ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಮುಹಮ್ಮದ್ ನಲಪಾಡ್ ಬೆಂಬಲಿಗರಿಂದ ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷರ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಹಳ್ಳೇಗೌಡ ಈ ಬಗ್ಗೆ ಆರೋಪ ಮಾಡಿದ್ದಾರೆ. ನಿನ್ನೆ (ಜನವರಿ 19) ಖಾಸಗಿ ಹೋಟೆಲ್ನಲ್ಲಿ ಯೂತ್ ಕಾಂಗ್ರೆಸ್ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ನಲಪಾಡ್ ಪದಗ್ರಹಣ ವಿಚಾರದ ಬಗ್ಗೆ ಚರ್ಚೆ ಮಾಡಲಾಗಿತ್ತು. ಚರ್ಚೆ ನಂತರ ಸಂಜೆ ಅಮೃತ ಹಳ್ಳಿಯ ಕ್ಲಬ್ನಲ್ಲಿ ಪಾರ್ಟಿ ನಡೆಸಿದ್ದು, ಪಾರ್ಟಿ ವೇಳೆ ಹಳ್ಳೇಗೌಡನ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ.

- Advertisement -

ನಲಪಾಡ್ ಖಾಸಗಿ ಹೋಟೆಲ್ ಒಂದರಲ್ಲಿ ಮಧ್ಯಾಹ್ನ ಗೆಟ್ ಟುಗೆದರ್ ರೀತಿಯಲ್ಲಿ ಪೂರ್ವಭಾವಿ ಸಭೆ ಕರೆದಿದ್ದರು. ಅಲ್ಲಿ ನಲಪಾಡ್ ಮುಂದಿನ ಅಧ್ಯಕ್ಷನಾಗಿ ಪ್ರಮಾಣವಚನ ತೆಗೆದುಕೊಳ್ಳುತ್ತೇನೆ ಎಂದು ಪ್ರಸ್ತಾಪಿಸಿದರು. ಮತ್ತು ರಾತ್ರಿ ಯಲಹಂಕದ ಒಂದು ಕ್ಲಬ್ ನಲ್ಲಿ ಭೋಜನಕ್ಕೆ ಕರೆದು, ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸಿದ್ದು ಹಳ್ಳೇಗೌಡ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರಾದ ಮಂಜುನಾಥ್ ಗೌಡ ಅವರ ಸದಸ್ಯ ಎಂದು ತಿಳಿದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮುಹಮ್ಮದ್ ನಲಪಾಡ್ ನಾವು ಸಭೆ ಸೇರಿರುವುದು ನಿಜ. ಮುಂದಿನ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಿದ್ದೇವೆ. ನಿನ್ನೆ ರಾತ್ರಿ ಹುಡುಗರು ಸೇರಿ ಪಾರ್ಟಿ ಮಾಡಿದ್ದಾರೆ. ನಾನು ರಾತ್ರಿ 9.30ರ ಸುಮಾರಿಗೆ ವಾಪಸಾಗಿದ್ದೆ. ಅಲ್ಲಿ ಯಾವುದೇ ರೀತಿಯ ಹಲ್ಲೆ ಘಟನೆ ನಡೆದಿಲ್ಲ. ಬೇಕಿದ್ದರೆ ರೆಸಾರ್ಟ್ ಸಿಸಿ ಕ್ಯಾಮರಾ ಪರಿಶೀಲಿಸಲಿ. ಸಿದ್ದು ಹಳ್ಳೇಗೌಡ, ನಾನು ಚೆನ್ನಾಗಿಯೇ ಇದ್ದೇವೆ ಎಂದು ಈ ಘಟನೆಯ ಬಗ್ಗೆ ಹೇಳಿಕೆ ನೀಡಿದ್ದಾರೆ.



Join Whatsapp