ಯೋಗಿ ಆದಿತ್ಯನಾಥ್ ವಿರುದ್ಧ ಭೀಮ್ ಆರ್ಮಿಯ ಚಂದ್ರಶೇಖರ್ ಆಜಾದ್ ಕಣಕ್ಕೆ

Prasthutha|

ನವದೆಹಲಿ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೋರಖ್ ಪುರ ಕ್ಷೇತ್ರದಿಂದ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಎದುರಿಸಲು ಸಜ್ಜಾಗಿದ್ದಾರೆ.
ಗೋವಾದಲ್ಲಿ ಭಾರತೀಯ ಜನತಾ ಪಕ್ಷ ಗುರುವಾರ 34 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಆದರೆ, ಮಾಜಿ ಸಿಎಂ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಗೆ ಟಿಕೆಟ್ ನಿರಾಕರಿಸಲಾಗಿದೆ. ಹಾಲಿ ಶಾಸಕ ಅಟಾನಾಸಿಯೊ ಮಾನ್ಸೆರೆಟ್ ಪಣಜಿಯಿಂದ ಚುನಾವಣೆಗೆ ಸ್ಪರ್ಧಿಸಿದರೆ, ಸಿಎಂ ಪ್ರಮೋದ್ ಸಾವಂತ್ ಸ್ಯಾಂಕ್ವೆಲಿಮ್ ನಿಂದ ಸ್ಪರ್ಧಿಸಲಿದ್ದಾರೆ. ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಅವರ ಪತ್ನಿ ದಿವ್ಯಾ ರಾಣೆ ಪೊರಿಯಮ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 41 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ಇವರಲ್ಲಿ 16 ಮಂದಿ ಮಹಿಳೆಯರಿಗೆ ಅವಕಾಶ ಕಲ್ಪಿಸಲಾಗಿದೆ.
ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಗುರುವಾರ ಚಂಡೀಗಡದಿಂದ ತಮ್ಮ ಎರಡು ದಿನಗಳ ಭೇಟಿಯನ್ನು ಪ್ರಾರಂಭಿಸಲಿದ್ದಾರೆ.



Join Whatsapp