ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದು ಅಶಿಸ್ತು ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಉಡುಪಿಯ ಸ್ಕಾರ್ಫ್ ವಿವಾದದ ಕುರಿತು ಸುದ್ದಿವಾಹಿನಿ NDTVಗೆ ಪ್ರತಿಕ್ರಿಯಿಸಿದ ಅವರು, “ಹಿಜಾಬ್ ಧರಿಸುವುದು ಅಶಿಸ್ತು. ಶಾಲಾ, ಕಾಲೇಜುಗಳು ಧರ್ಮವನ್ನು ಆಚರಿಸುವ ಸ್ಥಳವಲ್ಲ” ಎಂದು ಹೇಳಿದ್ದಾರೆ.
“ಕೆಲವು ಜನರು ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಸಮಸ್ಯೆಯನ್ನು ರಾಜಕೀಯಗೊಳಿಸುತ್ತಿದ್ದಾರೆ. ವಿದ್ಯಾರ್ಥಿಗಳು ಸಾಂವಿಧಾನಿಕ ಹಕ್ಕುಗಳ ಕುರಿತು ಈಗ ಏಕೆ ಪ್ರಸ್ತಾಪಿಸಲು ಬಯಸುತ್ತಾರೆ? ಎಂದು ಸಚಿವರು ಪ್ರಶ್ನಿಸಿದ್ದಾರೆ.
ಉಡುಪಿ ಜಿಲ್ಲೆಯ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬರುತ್ತಿದ್ದ ವಿದ್ಯಾರ್ಥಿನಿಗಳನ್ನು ಮೂರು ವಾರಗಳಿಂದ ತರಗತಿಯಿಂದ ಹೊರ ಹಾಕಲಾಗಿದೆ. ವಿದ್ಯಾರ್ಥಿಗಳು ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದು, ಪೋಷಕರು ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕಾಲೇಜಿನ ಅಧಿಕಾರಿಗಳಿಗೆ ಪದೇ ಪದೇ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.