ಲಾಹೋರ್ ಬಜಾರ್ ನಲ್ಲಿ ಬಾಂಬ್ ಸ್ಫೋಟ: 3 ಸಾವು, 22ಕ್ಕೂ ಹೆಚ್ಚು ಜನರಿಗೆ ಗಾಯ

Prasthutha|

ಲಾಹೋರ್: ಲಾಹೋರ್‌ನ ಪ್ರಸಿದ್ಧ ಅನಾರ್ಕಲಿ ಬಜಾರ್ ಪ್ರದೇಶದಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು 22ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಬೈಕ್ ಗೆ ಜೋಡಿಸಲಾದ ಬಾಂಬ್ ಸ್ಫೋಟಗೊಂಡ ಕಾರಣದಿಂದ ಈ ಸ್ಫೋಟ ಸಂಭವಿಸಿದೆ.

- Advertisement -

ಸಾವು-ನೋವುಗಳು ಮತ್ತು ಗಾಯಗೊಂಡವರ ಸಂಖ್ಯೆಯನ್ನು ಲಾಹೋರ್ ಪೊಲೀಸ್ ವಕ್ತಾರ ರಾಣಾ ಆರಿಫ್ ದೃಢಪಡಿಸಿದ್ದಾರೆ. ಈ ಘಟನೆಯಲ್ಲಿ 22 ಮಂದಿ ಗಾಯಗೊಂಡಿದ್ದಾರೆ ಎಂದು ಲಾಹೋರ್ ಕಾರ್ಯಾಚರಣೆಯ ಡಿಐಜಿ ಡಾ. ಮುಹಮ್ಮದ್ ಅಬಿದ್ ಖಾನ್ ಹೇಳಿದ್ದಾರೆ. ಈ ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದೆ.

ಬಾಂಬ್ ಸ್ಫೋಟದಿಂದ ಸಮೀಪದ ಕಟ್ಟಡಗಳ ಕಿಟಕಿ ಗಾಜುಗಳು ಒಡೆದು ಹೋಗಿದ್ದು, ಸ್ಫೋಟದ ಸ್ಥಳದ ಬಳಿ ನಿಲ್ಲಿಸಲಾಗಿದ್ದ ಹಲವಾರು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.



Join Whatsapp