ಕೇಂದ್ರದಿಂದ 1200 ಕೋಟಿ ವೆಚ್ಚದಲ್ಲಿ ಶಿರಾಡಿಘಾಟ್ ಚತುಷ್ಪಥ ರಸ್ತೆಗೆ ಅನುಮೋದನೆ

Prasthutha|

ಬೆಂಗಳೂರು: ರಾಜ್ಯ‌ ರಾಜಧಾನಿ ಬೆಂಗಳೂರು ಮತ್ತು ರಾಜ್ಯದ ಆರ್ಥಿಕ ಹೆಬ್ಬಾಗಿಲಾಗಿರುವ ಮಂಗಳೂರನ್ನು ಸಂಪರ್ಕಿಸುವ ಶಿರಾಡಿಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ.

- Advertisement -

ಎನ್‍ಹೆಚ್‍ಎಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಅಗತ್ಯವಿರುವ ಎಲ್ಲ ಸಹಕಾರ ಹಾಗೂ ಅನುಮೋದನೆಗಳನ್ನು ನೀಡುವುದಾಗಿ ಸಿಎಂ ಬೊಮ್ಮಾಯಿ ಭರವಸೆ ಕೊಟ್ಟಿದ್ದಾರೆ. ಶಿರಾಡಿಘಾಟ್ ಚತುಷ್ಪಥ ಯೋಜನೆ 1200 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ.

ಮಳೆಗಾಲದ ಸಮಯದಲ್ಲಿ ಈ ರಸ್ತೆ ಬಳಕೆ ಅಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಈ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.



Join Whatsapp