ಡಿ. ದೇವರಾಜ ಅರಸ್ ಭವನ ಲೋಕಾರ್ಪಣೆ ಮಾಡಿದ ಸಚಿವ ಅಂಗಾರ

Prasthutha|

ಮಂಗಳೂರು: ಶಿಕ್ಷಣಕ್ಕೆ ಉತ್ತೇಜನ ನೀಡುವ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಸತಿ ನಿಲಯಗಳ ನಿರ್ಮಾಣಕ್ಕೆ ಆದ್ಯತೆ ನೀಡುತ್ತಿದೆ, ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಮತ್ತಷ್ಟು ವಿದ್ಯಾರ್ಥಿ ನಿಲಯಗಳ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗವುದು ಎಂದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ತಿಳಿಸಿದರು.

- Advertisement -

ಅವರು ಜ.21ರ ಶುಕ್ರವಾರ ಸುಳ್ಯದ ಕೊಡಿಯಾಲ್ ಬೈಲ್ನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸಲಾದ ಡಿ. ದೇವರಾಜ ಅರಸ್ ಭವನವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ವಿದ್ಯಾರ್ಥಿ ನಿಲಯಗಳಲ್ಲಿದ್ದುಕೊಂಡು ಶಿಕ್ಷಣ ಪಡೆಯುವ ಸಹಸ್ರಾರು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯ ಸರ್ಕಾರವ ವಿದ್ಯಾರ್ಥಿ ನಿಲಯಗಳನ್ನು ನಿರ್ಮಿಸುತ್ತಿದೆ, ಅದರೊಂದಿಗೆ ಜಿಲ್ಲೆಯಲ್ಲಿ ಇನ್ನಷ್ಟು ವಸತಿ ನಿಲಯಗಳ ನಿರ್ಮಾಣಕ್ಕೆ ಆದಷ್ಟು ಬೇಗ ಶಂಕು ಸ್ಥಾಪನೆ ಮಾಡಲಾಗುವುದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರ ಶ್ರೇಯೋಭಿವೃದ್ದಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನ ಮಾಡಲಾಗುತ್ತಿದೆ ಎಂದು ಹೇಳಿದರು.

- Advertisement -

ಅರ್ಹರಿಗೆ ವಿವಿಧ ಇಲಾಖೆಗಳಿಂದ ದೊರೆಯಬೇಕಾದ ಎಲ್ಲಾ ಸವಲತ್ತಗಳನ್ನು ಸಂಬಂಧಿಸಿದ ಇಲಾಖೆಗಳು ನಿಗದಿತ ಕಾಲಮಿತಿಯೊಳಗೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆರೋಗ್ಯವಂತ ಮತ್ತು ಭ್ರಷ್ಟಚಾರ ಮುಕ್ತ ಸಮಾಜ ಕಟ್ಟುವುದೇ ಇದರ ಗುರಿ, ಇದರೊಂದಿಗೆ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲೆಯಲ್ಲಿ ಸ್ವ-ಉದ್ಯೋಗ ತರಬೇತಿ ಕೇಂದ್ರವನ್ನು ಸದ್ಯದಲ್ಲೇ ಪ್ರಾರಂಭಿಸಲಾಗುವುದು, ಸರ್ಕಾರ ಮಾಡುವ ಜನಪರ ಕಾರ್ಯಕ್ರಮಗಳಿಗೆ ಸಾರ್ವಜನಿಕರು ನಿರಂತರ ಪ್ರೋತ್ಸಾಹ ನೀಡಬೇಕು ಎಂದರು.

ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಸುಳ್ಯ ತಾಲೂಕು ಪಂಚಾಯತ್ ಅಧಿಕಾರಿ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್, ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಿತ್ರಾಕುಮಾರಿ, ಉಪಾಧ್ಯಕ್ಷ ಪ್ರಶಾಂತ್, ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಂದ್ರ ಕಲ್ಬಾವಿ, ಹಿಂದಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಚಿನ್ ಕುಮಾರ್, ತಾಲುಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶುಭಾ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು, ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.



Join Whatsapp