ನವದೆಹಲಿ: ಕೋವಿಡ್ 3ನೇ ಅಲೆಯಲ್ಲಿ ಸಾವನ್ನಪ್ಪಿದ ರೋಗಿಗಳ ಪೈಕಿ ಶೇಕಡಾ 60 ರಷ್ಟು ಮಂದಿ ಸಂಪೂರ್ಣ ಲಸಿಕೆ ಹಾಕಿಸದವರು ಎಂದು ಖಾಸಗಿ ಆಸ್ಪತ್ರೆ ನಡೆಸಿದ ಅಧ್ಯಯನದಿಂದ ಬಹಿರಂಗವಾಗಿದೆ.
ಕೋವಿಡ್ ನಿಂದಾಗಿ ಮೃತಪಟ್ಟವರ ಪೈಕಿ ಹೆಚ್ಚಿನವರು 70 ವರ್ಷಕ್ಕಿಂತ ಮೇಲ್ಪಟ್ಟ ಮತ್ತು ಕಿಡ್ನಿ, ಹೃದ್ರೋಗ, ಮಧುಮೇಹ, ಕ್ಯಾನ್ಸರ್ ಸೇರಿದಂತೆ ಅನೇಕ ಕಾಯಿಲೆಗಳಿಂದ ಬಳಲುತ್ತಿರುವವರು ಎಂದು ಮ್ಯಾಕ್ಸ್ ಹೆಲ್ತ್ ಕೇರ್ ಅಧ್ಯಯನ ಬಹಿರಂಗಪಡಿಸಿದೆ.
ಇದುವರೆಗೆ ಸಾವನ್ನಪ್ಪಿದ ಸುಮಾರು 82 ಮಂದಿಯ ಪೈಕಿ ಶೇಕಡಾ 60 ರಷ್ಟು ಮಂದಿ ಸಂಪೂರ್ಣ ಲಸಿಕೆ ಹಾಕಿಸದವರು ಎಂದು ಕಂಡುಬಂದಿರುವುದಾಗಿ ಸಂಸ್ಥೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.