18 ವರ್ಷ ಮೇಲ್ಪಟ್ಟವರು ಮತಾದರರ ಪಟ್ಟಿಯಲ್ಲಿ ಹೆಸರು ಸೇರಿಸಿ: ಲಕ್ಷ್ಮಿ ಪಿ.

Prasthutha|

ಮಡಿಕೇರಿ: 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಸಹ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಜಿ.ಪಂ. ಉಪಕಾರ್ಯದರ್ಶಿ ಲಕ್ಷ್ಮಿ ಪಿ. ತಿಳಿಸಿದರು.

- Advertisement -


ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.


ದೇಶದ ಭವಿಷ್ಯವನ್ನು ಉತ್ತಮಗೊಳಿಸುವಲ್ಲಿ ಮತದಾನ ಎಂಬುದು ಅತ್ಯಂತ ಮಹತ್ವದ ವಿಚಾರವಾಗಿದೆ. 18 ವರ್ಷ ಮೇಲ್ಪಟ್ಟ ಮತದಾರರು ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಬೇಕು. ಯಾವುದೇ ಆಮಿಷಗಳಿಗೆ ಬಲಿಯಾಗದೆ ಭಾರತೀಯ ಸಂವಿಧಾನವು ನಮಗೆ ನೀಡಿರುವ ಮತದಾನದ ಅಧಿಕಾರವನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

- Advertisement -


ಇದೇ ವೇಳೆ ರಾಷ್ಟ್ರೀಯ ಮತದಾರರ ದಿನದ ಪ್ರತಿಜ್ಞಾ ವಿಧಿಯನ್ನು ಜಿ.ಪಂ.ಉಪಕಾರ್ಯದರ್ಶಿ ಅವರು ಬೋಧಿಸಿದರು. ಜಿ.ಪಂ.ಮುಖ್ಯ ಯೋಜನಾಧಿಕಾರಿ ರಾಜ್ ಗೋಪಾಲ್, ಸಹಾಯಕ ಯೋಜನಾಧಿಕಾರಿ ಜೀವನ್ ಕುಮಾರ್, ಜಿ.ಪಂ. ಸಿಬ್ಬಂದಿಗಳು ಇತರರು ಇದ್ದರು.



Join Whatsapp