ಮಂಗಳೂರು ವಿಮಾನ ನಿಲ್ದಾಣದಲ್ಲಿ 29 ಲಕ್ಷ ಮೌಲ್ಯದ ಚಿನ್ನದ ಪೇಸ್ಟ್ ವಶ: ಪ್ರಯಾಣಿಕ ವಶಕ್ಕೆ

Prasthutha|

ಮಂಗಳೂರು: ದುಬೈನಿಂದ ಆಗಮಿಸಿದ ಪ್ರಯಾಣಿಕನಿಂದ ಅಂದಾಜು 29 ಲಕ್ಷ ಮೌಲ್ಯದ ಚಿನ್ನವನ್ನು ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.

- Advertisement -

ಕಳೆದ ಜ.25 ರಂದು ದುಬೈನಿಂದ ಬಂದ ಏರ್ ಇಂಡಿಯಾ ವಿಮಾನದಲ್ಲಿ ಬಂದ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ, ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ದೇಹದಲ್ಲಿ ಬಚ್ಚಿಟ್ಟುಕೊಂಡು ಪ್ರಯಾಣಿಸಿರುವುದು ಪತ್ತೆಯಾಗಿದೆ. 584 ಗ್ರಾಂ ಚಿನ್ನ ಪತ್ತೆಯಾಗಿದ್ದು, ಇದರ ಮೌಲ್ಯ 29,14,160ರೂ. ಎಂದು ಅಂದಾಜಿಸಲಾಗಿದೆ. ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಚಿನ್ನ ಮತ್ತು ಪ್ರಯಾಣಿಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.



Join Whatsapp