ಮಡಿಕೇರಿ: ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆ ಪಟ್ಟಣದ ಮೀನುಪೇಟೆಯಲ್ಲಿ ನಡೆದಿದೆ.
ಕಾಮಧೇನು ಬಡಾವಣೆಯ ನಿವಾಸಿ ಅಚ್ಚಪಂಡ ತಮ್ಮಯ್ಯ (94) ಎಂಬುವವರೇ ತಮ್ಮ ಮನೆಯಲ್ಲಿ ಗುಂಡು ಹಾರಿಸಿಕೊಂಡು ಮೃತಪಟ್ಟ ವ್ಯಕ್ತಿ.
ಅನಾರೋಗ್ಯವೇ ಆತ್ಮಹತ್ಯೆಗೆ ಕಾರಣವೆಂದು ಹೇಳಲಾಗಿದೆ. ತಮ್ಮಯ್ಯ ಅವರು ಸೇನೆಯ ನಂತರ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು.
ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.