ಲಕ್ನೋ: ಉತ್ತರ ಪ್ರದೇಶದಲ್ಲಿ ನ್ಯಾಯಾಂಗವು ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಆದಿತ್ಯನಾಥ್ ಸರ್ಕಾರ ಅಧಿಕಾರ ಬಂದ ನಂತರ ಈ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿದೆ ಎಂದು ದೆಹಲಿ ಮೂಲದ ಕ್ರಿಮಿನಲ್ ವಕೀಲರಾದ ಅಬೂಬಕ್ಕರ್ ಸಬ್ಬಕ್ ಆತಂಕ ವ್ಯಕ್ತಪಡಿಸಿದ್ದಾರೆ.
ಹಿರಿಯ ವಕೀಲರಾದ ಇವರು ಕ್ರಿಮಿನಲ್ ಪ್ರಕರಣದ ಹಿನ್ನೆಲೆಯಲ್ಲಿ ಜೈಲಿನಲ್ಲಿದ್ದಾರೆ. ಈ ಹಿಂದಿನಿಂದಲೂ ಉತ್ತರ ಪ್ರದೇಶದ ಹಲವಾರು ವಿಚಾರಣಾ ಕೈದಿಗಳ ಪರ ವಾದಿಸುತ್ತಿದ್ದರು.
ಉತ್ತರ ಪ್ರದೇಶದ ಚುನಾವಣೆಗೆ ಮುಂಚಿತವಾಗಿ ಮಾಧ್ಯಮದೊಂದಿಗೆ ಮಾತನಾಡಿದ ಸಬ್ಬಕ್, ಕಾನೂನು ಜಾರಿ, ನ್ಯಾಯಾಂಗ ಮತ್ತು ರಾಜ್ಯದಲ್ಲಿ ವ್ಯಾಪಕವಾಗುತ್ತಿರುವ ಕಾನೂನುಬಾಹಿರ ನಡೆ ಸಾಕಷ್ಟು ಸಂಚಲನ ಮೂಡಿಸಿದೆ ಎಂದು ಹೇಳಲಾಗಿದೆ.