ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ | ಆರೋಪಿ ಬಸ್ ಚಾಲಕ ಅರೆಸ್ಟ್

Prasthutha|

ಮಂಗಳೂರು: ನಗರದ ಕಾವೂರು ಠಾಣಾ ವ್ಯಾಪ್ತಿಯಲ್ಲಿ ಬಸ್ ಚಾಲಕನೋರ್ವ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದ್ದು, ಈ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಆರೋಪಿ ಬಾಗಲಕೋಟೆ ಮೂಲದ ದಯಾನಂದ (32) ಬಂಧಿತ. ಈತ 13 ರ ಹರೆಯದ ಬಾಲಕಿಯನ್ನು ಪುಸಲಾಯಿಸಿ ಆಕೆಯನ್ನು ನಿರ್ಜನ ಸ್ಥಳವೊಂದಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ದೂರು ನೀಡಲಾಗಿದೆ.
ಈ ಸಂಬಂಧ ಮಂಗಳೂರು ನಗರ ಮಹಿಳಾ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.‌



Join Whatsapp