ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿರುವ ನಮಾಝ್ ಕೊಠಡಿಗೆ ಸಂಘಪರಿವಾರದಿಂದ ದಾಳಿ

Prasthutha|

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿರುವ ನಮಾಝ್ ಕೊಠಡಿಯೊಂದಕ್ಕೆ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರು ದಾಳಿ ನಡೆಸಿದ್ದಲ್ಲದೆ, ನಮಾಝ್ ಮಾಡದಂತೆ ಬೆದರಿಕೆ ಹಾಕಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ದಾಳಿ ನಡೆದಿದ್ದು. ಸಾಮಾಜಿಕ ತಾಣದಾದ್ಯಂತ ಪ್ರಕರಣಕ್ಕೆ ಸಂಬಂಧಿಸಿದ ವೀಡಿಯೋಗಳು ವೈರಲ್‌ ಆಗಿವೆ.

- Advertisement -

ಈ ಕುರಿತು ಸ್ಪಷ್ಟನೆ ನೀಡಿರುವ ರೈಲ್ವೆ ಇಲಾಖೆ ಅಧಿಕಾರಿಗಳು, ರೈಲ್ವೆ ಇಲಾಖೆಯಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಧರ್ಮದ ಹಮಾಲರಿದ್ದಾರೆ. ಅವರವರ ಧರ್ಮದ ನಂಭಿಕೆಯ ಪ್ರಕಾರ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಮುಸ್ಲಿಂ ಸಮುದಾಯದವರು ಪ್ರಾರ್ಥನೆ ಸಲ್ಲಿಸಿದ ಸ್ಥಳದ ಪಕ್ಕದ ಕೊಠಡಿಯಲ್ಲಿ ಹಿಂದೂಗಳು ಪೂಜೆ ಸಲ್ಲಿಸುತ್ತಾರೆ. ಅದಕ್ಕೆ ಅಡ್ಡಿ ಪಡಿಸುವುದು ಸೂಕ್ತವಲ್ಲ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.

ಅಲ್ಲಿ ಮೂರೂ ಧರ್ಮದ ಜನರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆದಾಗ್ಯೂ ಮುಸ್ಲಿಮರು ಪ್ರಾರ್ಥನೆ ಸಲ್ಲಿಸುವ ಕೊಠಡಿಯನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ

- Advertisement -

ಇದು ರಾಷ್ಟ್ರೀಯ ಭದ್ರತೆಗೆ ಅಪಾಯವಾಗಿದೆ ಎಂದು ಆರೋಪಿಸಿ ಹಿಂದೂಜನಜಾಗೃತಿ ಸಮಿತಿಯ ಸದಸ್ಯರು ನಮಾಝ್ ಕೊಠಡಿಯ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಪ್ರಾರ್ಥನಾ ಮಂದಿರಕ್ಕೆ ಅನುಮತಿ ರದ್ದುಪಡಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಪುನೀತ್ ಕೇರೆಹಳ್ಳಿ, ಮಧುಗಿರಿ ಮೋದಿ ನೇತೃತ್ವದ ಸಂಘಪರಿವಾರದವರು ಎಚ್ಚರಿಕೆ ನೀಡಿದ್ದಾರೆ.



Join Whatsapp